ತುಮಕೂರು: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಗುಬ್ಬಿ ತಾಲೂಕಿನಲ್ಲಿ ನಡೆದ ಡಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದೇ ಗ್ರಾಮದ ಸುಮಾರು 20 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳ ಪೈಕಿ ಪ್ರಮುಖ ಆರೋಪಿ ಕೂಡ ಸೇರಿದ್ದಾನೆ ಎಂದು ಹೇಳಲಾಗಿದೆ. ಏಪ್ರಿಲ್ 22ರಂದು ಈ ಘಟನೆ ನಡೆದಿದ್ದು, ಪೆದ್ದನಹಳ್ಳಿಯಲ್ಲಿ ಗಿರೀಶ್ ಹೆಸರಿನ ಇಬ್ಬರು ಸ್ನೇಹಿತರನ್ನು ಚಿತ್ರ ಹಿಂಸೆ ನೀಡಿ ಬರ್ಬರವಾಗಿ ಹತ್ಯೆ ನಡೆಸಲಾಗಿತ್ತು.
ಹಿಂದಿನ ದಿನ ಪ್ರಮುಖ ಆರೋಪಿ ಗಿರೀಶ್ ನನ್ನು ಮನೆಯಿಂದ ಕರೆದುಕೊಂಡು ಹೋಗಿರುವುದಾಗಿ ಮೃತನ ಸಂಬಂಧಿಕರು ಹೇಳುತ್ತಿದ್ದಾರೆ. ಮರುದಿನ ಗಿರೀಶ್ ಹಾಗೂ ಆತನ ಸ್ನೇಹಿತ ಇಬ್ಬರ ಮೃತದೇಹ ಪತ್ತೆಯಾಗಿತ್ತು.
ಹತ್ಯೆಯ ಬಳಿಕ ಪಂಪ್ ಸೆಟ್ ಕಳವಿನ ಕಥೆ ಹೆಣೆಯಲಾಗಿದೆ ಎನ್ನುವ ಆರೋಪಗಳು ಕೂಡ ಕೇಳಿ ಬಂದಿತ್ತು. ವರದಿಗಳ ಪ್ರಕಾರ, ಘಟನೆಗೆ ಸಂಬಂಧಿಸಿದಂತೆ ಇದೀಗ ಪ್ರಮುಖ ಆರೋಪಿ ಸೇರಿದಂತೆ ಒಂದೇ ಗ್ರಾಮದ 20 ಮಂದಿಯನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5