ಬೆಂಗಳೂರು: ಕೆಂಗೇರಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರು ಡಿಕ್ಕಿಯಿಂದ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಾದಚಾರಿ ಸುಬ್ರಮಣಿಯನ್ (63) ಎಂಬುವರು ಬುಧವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.
ಜೂನ್ 10ರಂದು ಅಪಘಾತ ನಡೆದಿತ್ತು. ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಸುಬ್ರಮಣಿಯನ್ ಅವರಿಗೆ ತಲೆ, ಬಲಗೈ ಹಾಗೂ ಬಲ ಕಾಲಿಗೆ ತೀವ್ರ ಪೆಟ್ಟು ಬಿದ್ದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.


