ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಅರೇಪುರ ಗೇಟ್ ಬಳಿ ಹಿಟ್ ಆಯಂಡ್ ರನ್ ಗೆ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.
ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ಹಿಂಬದಿಯಿಂದ ಬಂದ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ರಸ್ತೆಯ ಮಧ್ಯೆ ಹಾರಿ ಬಿದ್ದ ವ್ಯಕ್ತಿ ಮೇಲೆ ಮತ್ತೊಂದು ವಾಹನ ಹರಿದಿದೆ ಎನ್ನಲಾಗಿದೆ.
ಅಪಘಾತದಿಂದ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯನ್ನು ಸ್ಥಳೀಯರು ಕೂಡಲೇ ಆಂಬ್ಯುಲೆನ್ಸ್ ನಲ್ಲಿ ಕರೆದೊಯ್ಯುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಮೃತಪಟ್ಟ ವ್ಯಕ್ತಿಯ ಗುರುತು ಪತ್ತೆಯಾಗದ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳೀಯ ಠಾಣೆಗಳಿಗೆ ಮಾಹಿತಿ ರವಾನಿಸಿದ್ದಾರೆ. ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


