ಬೆಳಗಾವಿ: ಸರ್ಕಾರದ ಉಪವಿಭಾಗಾಧಿಕಾರಿಗಳ (ಎಸಿ) ನ್ಯಾಯಾಲಯಗಳಲ್ಲಿ ಬಾಕಿಯಿರುವ ಪ್ರಕರಣಗಳನ್ನು ಕಳೆದ ಎರಡೂವರೆ ವರ್ಷದಲ್ಲಿ ರಾಜ್ಯ ಸರ್ಕಾರವು ಶೇ.80ರಷ್ಟು ವಿಲೇವಾರಿ ಮಾಡಿದ್ದು, ಇನ್ನುಳಿದ ಬಾಕಿ ಪ್ರಕರಣಗಳನ್ನು ಆದಷ್ಟು ಶೀಘ್ರದಲ್ಲೇ ಇತ್ಯರ್ಥಗೊಳಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ಮೇಲ್ಮನೆಯ ಪ್ರಶೋತ್ತರ ವೇಳೆ ಸದಸ್ಯ ರಾಮೋಜಿ ಗೌಡ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಎಸಿ ಕೋರ್ಟ್ ನ್ಯಾಯಾಲಯಗಳಲ್ಲಿ 62,857 ಪ್ರಕರಣಗಳು ಬಾಕಿಯಿದ್ದು ಅವುಗಳನ್ನು ಸಮರೋಪಾದಿಯಲ್ಲಿ ವಿಲೇವಾರಿ ಮಾಡಿ 14,324ಕ್ಕೆ ಇಳಿಸಿದ್ದು, ಅವುಗಳನ್ನು ಆದಷ್ಟು ಶೀಘ್ರವಾಗಿ ವಿಲೇವಾರಿ ಮಾಡಲಾಗುವುದು ಎಂದು ಹೇಳಿದರು.
ಹೆಚ್ಚು ಪ್ರಕರಣಗಳು ಬಾಕಿ ಇರುವ ಜಿಲ್ಲೆಗಳಲ್ಲಿನ ಉಪ ವಿಭಾಗಾಧಿಕಾರಿಗಳ ನ್ಯಾಯಾಲಯಗಳಲ್ಲಿ ದಾಖಲಾಗಿರುವ ಮೇಲ್ಮನವಿ ಪ್ರಕರಣಗಳನ್ನು ಉಪ ವಿಭಾಗಾಧಿಕಾರಿ ವೃಂದಕ್ಕೆ ಸಮಾನಾಂತರ ವೃಂದದ ಇತರೆ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆ.ಎ.ಎಸ್ ಅಧಿಕಾರಿಗಳಿಗೆ ಕಾರ್ಯ ಹಂಚಿಕೆ ಮಾಡಿ ಸರ್ಕಾರವು ಆದೇಶ ನೀಡಿದೆ ಎಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


