ತುಮಕೂರು: ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಅಕ್ಟೋಬರ್ 22 ರಂದು ಜಿಲ್ಲೆಯ 11 ಗ್ರಾಮ ಪಂಚಾಯತಿಗಳಲ್ಲಿ ಪಿಂಚಣಿ ಅದಾಲತ್ ಅನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.
ಈ ಅದಾಲತ್‌ನಲ್ಲಿ ಪಿಂಚಣಿಗೆ ಸಂಬಂಧಿಸಿದಂತೆ ಫಲಾನುಭವಿಗಳ ಕುಂದು–ಕೊರತೆಗಳನ್ನು ಆಲಿಸಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು. ಅಕ್ಟೋಬರ್ 22ರಂದು ಜಿಲ್ಲೆಯ ಶಿರಾ ತಾಲೂಕಿನ ಕಸಬಾ ಹೋಬಳಿ ಭೂವನಹಳ್ಳಿ; ತುರುವೇಕೆರೆ ತಾಲೂಕಿನ ಮಾಯಸಂದ್ರ ಹೋಬಳಿ ವಡವನಘಟ್ಟ; ತಿಪಟೂರು ತಾಲೂಕಿನ ನೊಣವಿನಕೆರೆ ಹೋಬಳಿ ನಾಗರಘಟ್ಟ; ಮಧುಗಿರಿ ತಾಲ್ಲೂಕಿನ ದೊಡ್ಡೇರಿ ಹೋಬಳಿ ಬಡವನಹಳ್ಳಿ; ತುಮಕೂರು ತಾಲೂಕಿನ ಬೆಳ್ಳಾವಿ ಹೋಬಳಿ ದೊಡ್ಡನಾರವಂಗಲ; ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಹೋಬಳಿ ದಸೂಡಿ, ಹಂದನಕೆರೆ ಹೋಬಳಿ ದೊಡ್ಡ ಎಣ್ಣೇಗೆರೆ, ಕಸಬಾ ಹೋಬಳಿ ದುಗುಡೀಹಳ್ಳಿ ಹಾಗೂ ಕಂದಿಕೆರೆ ಹೋಬಳಿ ತೀರ್ಥಪುರ; ಕೊರಟಗೆರೆ ತಾಲೂಕಿನ ಕಸಬಾ ಹೋಬಳಿಯ ತುಂಬಾಡಿ; ಪಾವಗಡ ತಾಲೂಕಿನ ಕಸಬಾ ಹೋಬಳಿ ಕೊಡಮಡಗು ಸೇರಿ 11 ಗ್ರಾಮ ಪಂಚಾಯಿತಿಗಳಲ್ಲಿ ಪಿಂಚಣಿ ಅದಾಲತ್ ನಡೆಯಲಿದ್ದು, ಪಿಂಚಣಿದಾರರು ಅದಾಲತ್‌ನಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಸಲ್ಲಿಸಿ ಪರಿಹರಿಸಿಕೊಳ್ಳಬಹುದು ಎಂದು ಅವರು ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296