ತುಮಕೂರು: ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಅಕ್ಟೋಬರ್ 28ರಂದು ಜಿಲ್ಲೆಯ 8 ಗ್ರಾಮ ಪಂಚಾಯತಿಗಳಲ್ಲಿ ಪಿಂಚಣಿ ಅದಾಲತ್ ಅನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.
ಈ ಅದಾಲತ್‌ನಲ್ಲಿ ಪಿಂಚಣಿಗೆ ಸಂಬಂಧಿಸಿದಂತೆ ಫಲಾನುಭವಿಗಳ ಕುಂದು–ಕೊರತೆಗಳನ್ನು ಆಲಿಸಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು. ಅಕ್ಟೋಬರ್ 28ರಂದು ಜಿಲ್ಲೆಯ ತಿಪಟೂರು ತಾಲೂಕಿನ ಕರಡಿ; ತುಮಕೂರು ತಾಲೂಕಿನ ಹೆಬ್ಬೂರು; ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಗಾಣದಾಳು, ರಾಮನಹಳ್ಳಿ, ಕುಪ್ಪೂರು ಹಾಗೂ ಹೊನ್ನೇಭಾಗಿ; ಕುಣಿಗಲ್ ತಾಲೂಕಿನ ಮಡಿಕೆಹಳ್ಳಿ; ಕೊರಟಗೆರೆ ತಾಲೂಕಿನ ವಡ್ಡಗೆರೆ ಗ್ರಾಮ ಪಂಚಾಯಿತಿಗಳಲ್ಲಿ ಪಿಂಚಣಿ ಅದಾಲತ್ ನಡೆಯಲಿದ್ದು, ಪಿಂಚಣಿದಾರರು ಅದಾಲತ್‌ನಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಸಲ್ಲಿಸಿ ಪರಿಹರಿಸಿಕೊಳ್ಳಬಹುದು ಎಂದು ಅವರು ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q