ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿ ಆಯ್ಕೆ, ಸರ್ಕಾರ ರಚನೆಗೆ ಭರ್ಜರಿ ಕಸರತ್ತು ನಡೆಯುತ್ತಿದೆ. ಈ ನಡುವೆ ಬಿಜೆಪಿಯಿಂದ ಮುಖ್ಯಮಂತ್ರಿಯನ್ನ ಆಯ್ಕೆ ಮಾಡಬೇಕು ಎಂದು ಬಿಜೆಪಿ ಸತತ ಒತ್ತಡ ಹಾಕುತ್ತಿದೆ. ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಹೆಸರು ಬಹುತೇಕ ಅಂತಿಮವಾಗಿದೆ ಎನ್ನುವಾಗಲೇ ಏಕನಾಥ್ ಶಿಂಧೆ ಅವರು ಹೊಸ ಕ್ಯಾತೆ ತೆಗೆದಿದ್ದಾರೆ.
ಹೌದು..! ಫಲಿತಾಂಶ ಪ್ರಕಟವಾಗಿ ಹತ್ತು ದಿನ ಸಮೀಪಿಸುತ್ತಿದ್ದರೂ ಮಹಾರಾಷ್ಟ್ರದಲ್ಲಿ ಯಾರು ಮುಖ್ಯಮಂತ್ರಿಯಾಗಬೇಕು ಎನ್ನುವ ವಿಚಾರ ಗೊಂದಲದಲ್ಲೇ ಕಳೆಯುತ್ತಿದೆ. ಈ ನಡುವೆ, ಏಕನಾಥ್ ಶಿಂಧೆ “ಜನ ನನ್ನನ್ನು ಮತ್ತೆ ಮುಖ್ಯಮಂತ್ರಿಯಾಗಿ ನೋಡುವುದಕ್ಕೆ ಆಸೆ ಪಡ್ತಿದ್ದಾರೆ” ಎಂದು ಹೇಳಿಕೆ ನೀಡುವ ಮೂಲಕ ಬಿಜೆಪಿಗೆ ಶಾಕ್ ಕೊಟ್ಟಿದ್ದಾರೆ.
ನಾನು ಉತ್ತಮ ಕೆಲಸ ಮಾಡಿರುವುದರಿಂದ ಜನ ಮತ್ತೆ ನಾನೇ ಮುಖ್ಯಮಂತ್ರಿಯಾಗಿ ಆಯ್ಕೆಯಾಗಬೇಕು ಎಂದು ಬಯಸುತ್ತಿದ್ದಾರೆ. ಮಹಾರಾಷ್ಟ್ರದ ಸಿ.ಎಂ ಆಗಬೇಕು ಎಂದು ನಿರೀಕ್ಷಿಸುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx