ಬೆಂಗಳೂರಿನಲ್ಲಿ ಕಳೆದೊಂದು ವಾರಗಳಿಂದ ಚಳಿಗೆ ಜನ ಗಡಗಡ ನಡುಗಿದ್ದಾರೆ. ಚಳಿಯ ಜೊತೆಗೆ ಇಬ್ಬನಿಯ ಪ್ರಮಾಣ ಕೂಡ ಹೆಚ್ಚಾಗಿದ್ದು, ಹೀಗಾಗಿ ಜನರು ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸುವಂತೆ ವೈದ್ಯರು ಸಲಹೆ ನೀಡುತ್ತಿದ್ದಾರೆ.
ಉತ್ತರ ಭಾರತದಿಮದ ಶೀತಗಾಳಿ ಬೀಸುತ್ತಿರುವ ಪರಿಣಾಮ ನಗರದಲ್ಲಿ ತಾಪಮಾನ ಮತ್ತಷ್ಟು ತಗ್ಗುವ ಮುನ್ಸೂಚನೆ ಇದೆ. ಜನವರಿ ತಿಂಗಳಲ್ಲಿ ಕನಿಷ್ಠ ತಾಪಮಾನ 15.8 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
ಮುಂದಿನ ವಾರ ಕನಿಷ್ಠ ತಾಪಮಾನ 10 ರಿಂದ 12 ಡಿಗ್ರಿ ಸೆಲ್ಸಿಯಸ್ ನಷ್ಟು ಇಳಿಕೆಯಾಗುವ ಮುನ್ಸೂಚನೆ ಕೂಡ ಇರುವುದರಿಂದ ಬೆಂಗಳೂರಿನಲ್ಲಿ ಚಳಿ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ದಟ್ಟವಾಗಿದೆ.
ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಚಳಿಗಾಲ ತುಸು ಹೆಚ್ಚಿರಲಿದ್ದು, ಮಳೆ ಜಾಸ್ತಿ ಬಿದ್ದ ಕಾರಣ ಕೆರೆ, ನದಿ, ಅಣೆಕಟ್ಟುಗಳು ತುಂಬಿರುವುದು ಕೂಡ ವಾತಾವರಣದ ಚಳಿ ಪ್ರಮಾಣವನ್ನು ಹೆಚ್ಚಿಸಲು ಕಾರಣವಾಗುತ್ತಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx