ದಾವಣಗೆರೆ: ರಾಜ್ಯದಲ್ಲಿ ಭಯೋತ್ಪಾದಕ ಸರ್ಕಾರ ಅಡಳಿತ ನಡೆಸುತ್ತಿದ್ದು, ಕಾಂಗ್ರೆಸ್ ನಡೆಗೆ ಜನರು ಬೇಸತ್ತಿದ್ದಾರೆ ಎಂದು ಸಚಿವ ಎಂ.ಪಿ. ಪಿಣುಕಾಚಾರ್ಯ ಕಾಂಗ್ರೆಸ್ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ.
ದಾವಣಗೆರೆಯಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ್ ಹತ್ಯೆ ಖಂಡಿಸಿ ತಾಲೂಕಿನಾದ್ಯಂತ ಕೃತ್ಯ ಎಸಗಿದವರನ್ನ ಗುಂಡಿಟ್ಟು ಕೊಲ್ಲಬೇಕು, ನೇಣಿಗೇರಿಸಬೇಕು ಎಂದು ಪ್ರತಿಭಟನೆ ನಡೆಸುತ್ತಿದ್ದಾರೆ.
ಇತ್ತ ಗೃಹ ಸಚಿವರು, ಸಿಎಂ ಅವರು ಇದು ವೈಯಕ್ತಿಕ ಕಾರಣಕ್ಕೆ ನಡೆದ ಕೊಲೆ ಅಂತಾರೆ. ಇಂಥವರಿಗೆ ಚುನಾವಣೆಯಲ್ಲಿ ಎಲ್ಲರೂ ಸೇರಿ ತಕ್ಕ ಪಾಠ ಕಲಿಸಬೇಕು ಎಂದಿದ್ದಾರೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ, ಅಲ್ಲದೆ ಕಾಂಗ್ರೆಸ್ ಸರ್ಕಾರದಲ್ಲಿ PFI-SDPI ಕೇಸ್ ಗಳನ್ನ ವಾಪಸ್ ಪಡೆದಿದ್ದಾರೆ. ಕಾನೂನು ಸುವ್ಯವಸ್ಥೆ ಬಿಗಿ ಇದ್ದರೆ ಈ ರೀತಿ ಘಟನೆ ನಡೆಯುತ್ತಿರಲಿಲ್ಲ ಎಂದು ಆಡಳಿತ ಪಕ್ಷದ ವಿರುದ್ಧ ಗುಡುಗಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296