ತುಮಕೂರು ವಿಶೇಷ ವರದಿ: ಪಡಿತರ ಅಂಗಡಿಗಳಲ್ಲಿ ನೀಡಲಾಗುತ್ತಿರುವ ಸಾರಾಯುಕ್ತ ಅಕ್ಕಿಯನ್ನು ಮಾಹಿತಿಯ ಕೊರತೆಯಿಂದಾಗಿ ಸಾರ್ವಜನಿಕರು ಬೇರ್ಪಡಿಸಿ ಉಪಯೋಗಿಸುತ್ತಿರುವ ಘಟನೆ ನಡೆದಿದೆ.
ಪಡಿತರ ಅಂಗಡಿಯಲ್ಲಿ ಪಡೆದ ಅಕ್ಕಿಯಲ್ಲಿನ ಸಾರಯುಕ್ತ ಅಕ್ಕಿಯನ್ನು ಬೇರ್ಪಡಿಸಿ ಸಾರ್ವಜನಿಕರು ಉಪಯೋಗಿಸುತ್ತಿದ್ದಾರೆ. ಇದು ಪ್ಲಾಸ್ಟಿಕ್ ಅಕ್ಕಿ ಎಂಬ ಅನುಮಾನ ಸಾರ್ವಜನಿಕರಿಗಿದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಈ ಬಗ್ಗೆ ಸರಿಯಾದ ಮಾಹಿತಿಯನ್ನು ನೀಡಬೇಕಿತ್ತು. ಆದ್ರೆ ಅಧಿಕಾರಿಗಳು ಈ ಬಗ್ಗೆ ತುಟಿ ತೆರೆಯದ ಹಿನ್ನೆಲೆಯಲ್ಲಿ ಸಾರ್ವಜನಿಕರು ತಪ್ಪು ತಿಳುವಳಿಕೆಯನ್ನೇ ಸತ್ಯ ಎಂದು ನಂಬುವಂತಾಗಿದೆ.
ಅಧಿಕಾರಿಗಳು ಈ ಅಕ್ಕಿಯ ವಿಚಾರದಲ್ಲಿ ಸಾರ್ವಜನಿಕರಿಗೆ ಸರಿಯಾದ ಮಾಹಿತಿ ನೀಡಬೇಕು. ಇನ್ನೂ ಕೂಡ ಸರಿಯಾದ ಮಾಹಿತಿ ನೀಡಲು ಮುಂದಾಗದಿದ್ದರೆ, ವಾಟ್ಸಾಪ್, ಫೇಸ್ ಬುಕ್ ಗಳಲ್ಲಿ ಹರಿದಾಡುತ್ತಿರುವ ವದಂತಿಗಳನ್ನೇ ಜನರು ಸತ್ಯ ಎಂದು ನಂಬುವಂತಾಗುತ್ತದೆ ಎನ್ನುವ ಮಾತುಗಳು ಕೇಳಿ ಬಂದಿವೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


