ನವದೆಹಲಿ: ಭ್ರಷ್ಟಾಚಾರ ಮತ್ತು ಸುಳ್ಳುಗಳಿಂದ ಬೇಸತ್ತಿದ್ದರು, ಅವರು ಉತ್ತಮ ಆಡಳಿತ ಬಯಸಿದರು, ನಾಟಕಗಳನ್ನಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ದೆಹಲಿ ವಿಧಾನ ಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ಬೆನ್ನಲ್ಲೇ ಆಮ್ ಆದ್ಮಿ ಪಾರ್ಟಿ ವಿರುದ್ಧ ವಾಗ್ದಾಳಿ ನಡೆಸಿದರು.
ಪಕ್ಷದ ಪ್ರಧಾನ ಕಚೇರಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, 27 ವರ್ಷಗಳ ಬಳಿಕ ದೆಹಲಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ದೆಹಲಿಯಲ್ಲಿ ಡಬಲ್ ಇಂಜಿನ್ ಸರ್ಕಾರದಿಂದ “ಡಬಲ್ ಸ್ಪೀಡ್”ನಲ್ಲಿ ಅಭಿವೃದ್ಧಿಯನ್ನು ಜನರು ನಿರೀಕ್ಷಿಸಬಹುದು ಎಂದು ಭರವಸೆ ನೀಡಿದರು.
ಕಾಂಗ್ರೆಸ್ ವಿರುದ್ಧವೂ ವಾಗ್ದಾಳಿ ನಡೆಸಿದ ಮೋದಿ, ಭಾರತದ ಅತ್ಯಂತ ಹಳೆಯ ಪಕ್ಷವು ದೆಹಲಿಯಲ್ಲಿ ಆರು ಚುನಾವಣೆಗಳಲ್ಲಿ ತನ್ನ ಖಾತೆಯನ್ನು ತೆರೆಯಲು ಸಾಧ್ಯವಾಗಿಲ್ಲ. ಕಾಂಗ್ರೆಸ್ ಒಂದು ಪರಾವಲಂಬಿ ಪಕ್ಷ ಎಂದು ನಾನು ನಿಮಗೆ ಹೇಳಿದ್ದೆ. ಅವರು ಮುಳುಗಿದಾಗಲೆಲ್ಲಾ ಇತರ ಪಕ್ಷವನ್ನು ತಮ್ಮೊಂದಿಗೆ ತೆಗೆದುಕೊಂಡು ಮುಳುಗುತ್ತಾರೆ ಎಂದು ಟೀಕಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4