ನವದೆಹಲಿ: ಗಾಯಗೊಂಡು ರಸ್ತೆ ಬದಿಯಲ್ಲಿ ಬಿದ್ದಿದ್ದ ನವಿಲನ್ನು ರಕ್ಷಿಸುವ ಬದಲು ಜನರು, ಜೀವಂತವಾಗಿರುವಾಗಲೇ ಅದರ ಗರಿಗಳನ್ನು ಕಿತ್ತು ತಮ್ಮ ಮನೆಗಳಿಗೆ ಕೊಂಡೊಯ್ಯುತ್ತಿರುವ ಅಮಾನವೀಯ ಘಟನೆಯೊಂದು ನಡೆದಿದ್ದು, ಈ ಸಂಬಂಧ ಅಮಾನವೀಯ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ನವಿಲಿನ ದೇಹದಲ್ಲಿರುವ ಪ್ರತಿಯೊಂದು ಗರಿಗಳನ್ನೂ ಕಿತ್ತ ಜನರು ನವಿಲಿನ ದೇಹವನ್ನು ರಸ್ತೆಯಲ್ಲಿ ಎಸೆದಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
@anitavladivoski X ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ವಿಡಿಯೋ ನೋಡಿ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ತಮ್ಮ ವಿನೋದಕ್ಕಾಗಿ ಜನರು ಒಂದು ಮೂಕ ಪಕ್ಷಿಗೆ ಈ ರೀತಿಯಾಗಿ ಹಿಂಸೆ ಕೊಡುತ್ತಿದ್ದಾರೆ ಎಂದು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಘಟನೆ ಎಲ್ಲಿ ನಡೆದಿರುವುದು ಎನ್ನುವುದನ್ನು ಪತ್ತೆ ಹಚ್ಚಿ ದುಷ್ಕೃತ್ಯ ನಡೆಸಿರುವವರ ವಿರುದ್ಧ ಕಾನೂನು ರೀತಿಯ ಕ್ರಮಕೈಗೊಳ್ಳಬೇಕು ಅಂತ ವ್ಯಾಪಕ ಒತ್ತಾಯ ಕೇಳಿ ಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q