ಹೆಚ್.ಡಿ.ಕೋಟೆ: ಹುಲಿ ಉಪಟಳ ಗಣಿಶದ್ದು ಗ್ರಾಮಸ್ಥರು ತತ್ತರಿಸಿ ಹೋಗಿದ್ದು, ಪ್ರತಿನಿತ್ಯ ಪ್ರಾಣ ಭಯದಲ್ಲಿ ಗ್ರಾಮಸ್ಥರು ದಿನದೂಡುವಂತಾಗಿದೆ.
ಪ್ರತಿನಿತ್ಯ ಸಾಕು ಪ್ರಾಣಿಗಳನ್ನು ಹುಲಿ ಹೊತ್ತೊಯ್ಯುತ್ತಿದೆ. ಈ ಬಗ್ಗೆ ಅರಣ್ಯ ಇಲಾಖೆಗೆ ಎಷ್ಟು ಭಾರಿ ಮನವಿ ಮಾಡಿದರೂ ಕ್ಯಾರೇ ಅನ್ನುತ್ತಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.
ನಿನ್ನೆ ರಾತ್ರಿ 4 ಮೇಕೆಗಳನ್ನು ವ್ಯಾಘ್ರ ಬಲಿಪಡೆದುಕೊಂಡಿದೆ. ಅಧಿಕಾರಿಗಳು ಇತ್ತ ಗಮನ ಹರಿಸಿ ಅಂತ ಗ್ರಾಮಸ್ಥರು ಅಂಗಲಾಚುತ್ತಿದ್ದಾರೆ.
ಇಷ್ಟಾದರೂ ಇನ್ನೂ ಅರಣ್ಯ ಇಲಾಖೆ ಅಧಿಕಾರಿಗಳು ಘಟನೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ, ಜನರ ಮೇಲೆ ಹುಲಿ ದಾಳಿ ಮಾಡುವುದಕ್ಕೂ ಮೊದಲೇ ಅಧಿಕಾರಿಗಳು ಕ್ರಮಕೈಗೊಳ್ಳುತ್ತಾರೆಯೇ ಅಥವಾ ನರಬಲಿಯಾಗುವವರೆಗೂ ಕಾಯುತ್ತಾರೆಯೇ ಎನ್ನುವುದನ್ನು ಕಾದು ನೋಡಬೇಕಿದೆ.
ವರದಿ: ಮಲಾರ ಮಹದೇವಸ್ವಾಮಿ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296