ಬೆಂಗಳೂರು: ಉಪ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಕೂಟಕ್ಕೆ ಭಾರೀ ಮುಖಭಂಗವಾಗಿದೆ. ಜೆಡಿಎಸ್-ಬಿಜೆಪಿಯ ಮೈತ್ರಿಕೂಟದ ವಿಚಾರವಾಗಿ ಜನರ ಅಸಹನೆ ಈ ಚುನಾವಣೆಯಲ್ಲಿ ಪ್ರದರ್ಶನವಾಗಿದೆ.
ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಶಿಗ್ಗಾಂವಿ ಮತ್ತು ಸಂಡೂರು ಬಿಜೆಪಿ ಉಳಿಸಿಕೊಂಡು ಚನ್ನಪಟ್ಟಣವನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟಿತ್ತು.
ಚುನಾವಣಾ ಕಾಲದಲ್ಲಿ ಅಭಿವೃದ್ಧಿ ಯೋಜನೆಗಳಿಗಿಂತಲೂ ಭಾವನಾತಕ ಚರ್ಚೆಗಳೇ ಜಾಸ್ತಿ ನಡೆದವು. ಬಿಜೆಪಿ ವಕ್ಫ್ ವಿಚಾರವನ್ನು ಪ್ರಮುಖವಾಗಿ ಮುಂದಿಟ್ಟುಕೊಂಡಿದ್ದರೆ, ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ಜಾತಿ ಅಸ್ತ್ರವನ್ನು ಪ್ರಯೋಗಿಸಿತ್ತು. ಆದರೆ ಇದ್ಯಾವುದಕ್ಕೂ ಜನರು ಮಣೆ ಹಾಕಲಿಲ್ಲ.
ಚುನಾವಣೆಗೆ ನಾಮಪತ್ರ ಸಲ್ಲಿಸುವ ಕೆಲ ದಿನಗಳ ಹಿಂದಷ್ಟೇ ಕಾಂಗ್ರೆಸ್ ಗೆ ಸೇರ್ಪಡೆಯಾದ ಸಿ.ಪಿ.ಯೋಗೇಶ್ವರ್ ಸದ್ದುಗದ್ದಲವಿಲ್ಲದೆ ಪ್ರಚಾರ ನಡೆಸಿದರು. ಚನ್ನಪಟ್ಟಣವನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಹೋದರ ಮಾಜಿ ಸಂಸದ ಡಿ.ಕೆ.ಸುರೇಶ್ ಪ್ರತಿಷ್ಠೆಯನ್ನಾಗಿ ಪರಿಗಣಿಸಿದ್ದರು. ಯೋಗೇಶ್ವರ್ ಗೆ ಡಿಕೆ ಬ್ರದರ್ಸ್ ಬೆಂಬಲ ಗೆಲುವಿಗೆ ಕಾರಣವಾಗಿದೆ ಅಂತ ಹೇಳಲಾಗುತ್ತಿದೆ.
ಸಂಡೂರಿನಲ್ಲಿ ಗಣಿದಣಿ ಜನಾರ್ಧನರೆಡ್ಡಿ ಮತ್ತು ಸ್ಥಳೀಯ ನಾಯಕರ ಅಬ್ಬರದ ಪ್ರಚಾರದ ನಡುವೆಯೂ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಗೆಲುವು ಸಾಧಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಲವು ಬಾರಿ ಸಂಡೂರು ಮತ್ತು ಶಿಗ್ಗಾಂವಿ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಿದ್ದರು. ಸಂಡೂರಿನ ಜನ ಕಾಂಗ್ರೆಸ್ ಅಭ್ಯರ್ಥಿಯ ಕೈ ಹಿಡಿಯುವ ಮೂಲಕ ಗ್ಯಾರಂಟಿ ಯೋಜನೆಗಳಿಗೆ ಜೈ ಅಂದಂತಿದೆ
ಕಾಂಗ್ರೆಸ್ನಲ್ಲಿ ಯಾಸಿರ್ ಖಾನ್ ಪಠಾಣ್ ಹಾಗೂ ಅಜ್ಜಂಪೀರ್ ಖಾದ್ರಿ ಅವರ ನಡುವೆ ಟಿಕೆಟ್ ಗೆ ಭಾರಿ ಪೈಪೋಟಿ ನಡೆದಿತ್ತು. ಟಿಕೆಟ್ ದೊರೆಯದ ಕಾರಣಕ್ಕೆ ಅಜ್ಜಂಪೀರ್ ಖಾದ್ರಿ ಕಾಂಗ್ರೆಸ್ ನ ಅಧಿಕೃತ ಅಭ್ಯರ್ಥಿ ಪಠಾಣ್ ಅವರನ್ನು ರೌಡಿ ಶೀಟರ್ ಎಂದು ಕರೆದಿದ್ದರು. ಆದರೆ ಕೊನೆಗೂ ಎಲ್ಲರ ಮನವೊಲಿಸಲು ಕಾಂಗ್ರೆಸ್ ಯಶಸ್ವಿಯಾಗಿತ್ತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q