ಬೀದರ್: ಶಾಸಕ ಪ್ರಭು ಚವ್ಹಾಣ್ ಕ್ಷೇತ್ರದಲ್ಲಿ ಕುಡಿಯುವ ನೀರಿಗಾಗಿ ಜನರು ಪರದಾಡುತ್ತಿದ್ದು, ಬೀದರ್ ಜಿಲ್ಲಾ ಕಮಲನಗರ ತಾಲ್ಲೂಕಿನ ಸಾವಳಿ ಗ್ರಾಮದಲ್ಲಿ ನೀರಿಗೆ ಹಾಹಾಕಾರ ಸೃಷ್ಟಿಯಾಗಿದೆ.
ಗ್ರಾಮದಲ್ಲಿ ಹನಿ ಹನಿ ಕುಡಿಯೋ ನೀರಿಗೂ ಜನರು ಪರದಾಡುವಂತಾಗಿದೆ. ಟ್ಯಾಂಕ್ ಬಳಿ ಬಿಂದಿಗೆಗಳ ಸಾಲು, ನೀರಿಗಾಗಿ ಕ್ಯೂ ನಿಂತ ಮಹಿಳೆಯರ ದಂಡೇ ಕಾಣಿಸುತ್ತಿದೆ.
ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಸಾವಳಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಸೃಷ್ಟಿಯಾಗಿದೆ. ತಕ್ಷಣವೇ ಶಾಸಕರು ಮಧ್ಯಪ್ರವೇಶಿಸಿ ಕುಡಿಯುವ ನೀರಿನ ಸಮಸ್ಯೆ ಬಗೆ ಹರಿಸಬೇಕು, ಇಲ್ಲವಾದರೆ ಸಾರ್ವಜನಿಕರು ತೀವ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4