ಮಂಡ್ಯ: ರಾಜ್ಯ ಸರಕಾರವು ನಿನ್ನೆ ಹೊಸ ಆದೇಶ ಹೊರಡಿಸಿದೆ. ಗ್ಯಾರಂಟಿ ಸಮಿತಿ ಅಧ್ಯಕ್ಷ, ಉಪಾಧ್ಯಕ್ಷರ ಗೌರವಧನ ಬಿಡುಗಡೆಗೆ ಆದೇಶ ಮಾಡಿದೆ. ರಾಜ್ಯದ ಜನರ ತೆರಿಗೆ ಹಣವನ್ನು ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ಬಳಸಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಆರೋಪಿಸಿದ್ದಾರೆ.
ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸರಕಾರಿ ನೌಕರರಿಗೆ ಸಂಬಳ ಕೊಡಲು ಸಾಧ್ಯವಾಗುತ್ತಿಲ್ಲ. ಗ್ಯಾರಂಟಿಗೆ ಹಣ ಕ್ರೋಡೀಕರಿಸಲು ಸಾಧ್ಯವಾಗದೆ, ಕಸದ ಮೇಲೆ ತೆರಿಗೆ ಹಾಕುವಂತಹ ಸರಕಾರ ಸಿದ್ದರಾಮಯ್ಯರ ನೇತೃತ್ವದ್ದು ಎಂದು ಟೀಕಿಸಿದರು.
ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಆಗುತ್ತಿಲ್ಲ. ಎಲ್ಲ ಶಾಸಕರು ಅನುದಾನವಿಲ್ಲದೆ ಪರದಾಡುತ್ತಿದ್ದಾರೆ. ಮತ್ತೊಂದು ಕಡೆ ಬೆಲೆ ಏರಿಕೆ ಮೂಲಕ ಸರಕಾರವು ಬಡವರಿಗೆ ಬರೆ ಎಳೆಯುತ್ತಿದೆ. ಕೂಡಲೇ ಚುನಾವಣೆ ನಡೆದರೆ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಹೀನಾಯವಾಗಿ ಸೋಲುವುದು ನಿಶ್ಚಿತ ಎಂಬುದು ಸರ್ವೇಯ ಫಲಿತಾಂಶದಿಂದ ಗೊತ್ತಾಗಿದೆ. ಬಡವರ ವಿರೋಧಿ ಸರಕಾರ ತೊಲಗಬೇಕು ಎಂದು ಜನಸಾಮಾನ್ಯರು ಮಾತನಾಡುತ್ತಿದ್ದಾರೆ ಎಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW