ಬೆಂಗಳೂರು: ಪೆಪ್ಪರ್ ಸ್ಪ್ರೇ ಮಾಡಿ ಸಾಫ್ಟ್‌ವೇರ್ ಎಂಜಿನಿಯರ್ ವೊಬ್ಬರ ಮೊಬೈಲ್ ಕಳವಿಗೆ ಯತ್ನಿಸಿರುವ ಘಟನೆ ಹೊಸಹಳ್ಳಿ ಮೆಟ್ರೋ ನಿಲ್ದಾಣ ಸಮೀಪ ರಾತ್ರಿ ನಡೆದಿದೆ.
ಸಾಫ್ಟ್‌ವೇರ್ ಎಂಜಿನಿಯರ್ ಅಭಿಜಿತ್ ಮೆಟ್ರೋದಿಂದ ಇಳಿದು ಸ್ನೇಹಿತನ ಜೊತೆಗೆ ಮಾತನಾಡುತ್ತಾ ತೆರೆಳುತ್ತಿದ್ದರು. ಇದೇ ವೇಳೆ ಒಂದು ಬೈಕ್ ನಲ್ಲಿ ಬಂದ ಮೂವರು ದರೋಡೆಕೋರರು, ಅಭಿಜಿತ್ ಜೊತೆಗೆ ಜಗಳವಾಡಿ ಹಲ್ಲೆ ಮಾಡಿ, ಪೆಪ್ಪರ್ ಸ್ಪ್ರೇ ಮಾಡಿದ್ದಾರೆ. ಅವರ ಮೊಬೈಲ್ ನ್ನು ಕಳವು ಮಾಡಲು ಯತ್ನಿಸುತ್ತಿದ್ದ ವೇಳೆ ಅಭಿಜಿತ್ ಸಹಾಯಕ್ಕಾಗಿ ಕೂಗಿದ್ದಾರೆ. ಈ ವೇಳೆ ದರೋಡೆಕೋರರು ಪರಾರಿಯಾಗಿದ್ದಾರೆ.
10.45ರ ಸುಮಾರಿಗೆ ಈ ಘಟನೆ ನಡೆದಿತ್ತು. ಈ ಬಗ್ಗೆ ಅಭಿಜಿತ್ ಅವರು ಗೋವಿಂದರಾಜ ನಗರ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕೃತ್ಯ ನಡೆದ ಸ್ಥಳದ ಸುತ್ತಮುತ್ತಲಿನ ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸಿ ದರೋಡೆಕೋರರ ಪತ್ತೆಗೆ ಬಲೆಬೀಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296