nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಕ್ಟೋಬರ್ ತಿಂಗಳ ಮಹತ್ವದ ತೆರಿಗೆ ಗಡುವುಗಳು: ತೆರಿಗೆದಾರರು ಹಾಗೂ ವೃತ್ತಿಪರರು ಗಮನಿಸಬೇಕಾದ ಶಾಸನಬದ್ಧ ನಿಯಮಾವಳಿಗಳು

    October 6, 2026

    ಎತ್ತಿನಹೊಳೆ ನಾಲಾ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಎನ್‌.ಡಿ.ಎ ಮೈತ್ರಿಕೂಟದ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಆಗ್ರಹ

    October 6, 2026

    ಜನವರಿ ನಂತರವೂ ಮಳೆ ಬಾರದೇ ಇದ್ದರೆ ಜಿಲ್ಲೆಯಲ್ಲಿ ಗಂಭೀರ ಸಮಸ್ಯೆ: ತುಮಕೂರಿನಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿಕೆ

    October 6, 2026
    Facebook Twitter Instagram
    ಟ್ರೆಂಡಿಂಗ್
    • ಅಕ್ಟೋಬರ್ ತಿಂಗಳ ಮಹತ್ವದ ತೆರಿಗೆ ಗಡುವುಗಳು: ತೆರಿಗೆದಾರರು ಹಾಗೂ ವೃತ್ತಿಪರರು ಗಮನಿಸಬೇಕಾದ ಶಾಸನಬದ್ಧ ನಿಯಮಾವಳಿಗಳು
    • ಎತ್ತಿನಹೊಳೆ ನಾಲಾ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಎನ್‌.ಡಿ.ಎ ಮೈತ್ರಿಕೂಟದ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಆಗ್ರಹ
    • ಜನವರಿ ನಂತರವೂ ಮಳೆ ಬಾರದೇ ಇದ್ದರೆ ಜಿಲ್ಲೆಯಲ್ಲಿ ಗಂಭೀರ ಸಮಸ್ಯೆ: ತುಮಕೂರಿನಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿಕೆ
    • ₹58 ಸಾವಿರದಿಂದ ಬೈಕ್ ಖರೀದಿ; 70 ಕಿ.ಮೀ ಮೈಲೇಜ್ ನೀಡುವ 5 ಬಜೆಟ್ ಬೈಕ್‌ ಗಳಿವು!
    • 50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!
    • ಮಹಾರಾಜವಾಡಿ ಮಹಿಳೆಯರಿಗೆ ‘ಶಕ್ತಿ’ಯ ಬಲ: ವಿಬಿ–ಜಿ ರಾಮ್ ಜಿ ಕೆಲಸಕ್ಕೆ ಉಚಿತ ಬಸ್ ನೆರವು
    • ಬೆಂಗಳೂರಲ್ಲಿ ಬಿಡಾಡಿ ದನಗಳ ‘ಟೋಯಿಂಗ್‌ಗೆ’ ವಿಶೇಷ ವಾಹನ: ರಸ್ತೆಗೆ ಜಾನುವಾರು ಬಿಡುವವರಿಗೆ ಬಿಸಿ!
    • ರಜನಿಕಾಂತ್ ಜೊತೆ ಶಿವಣ್ಣನ ಮಾಸ್ ದರ್ಬಾರ್: ಬಿಡುಗಡೆಯಾಯ್ತು ‘ಜೈಲರ್ 2’ ಟ್ರೇಲರ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಂಗಳೂರಿನಲ್ಲಿ ಮಳೆಯಿಂದಾಗುವ ಹಾನಿ ತಡೆಗಟ್ಟಲು 5000 ಕೋಟಿ ರೂ. ಗಳ ಶಾಶ್ವತ ಯೋಜನೆ: ಸಚಿವ ಕೃಷ್ಣ ಭೈರೇಗೌಡ
    ರಾಜ್ಯ ಸುದ್ದಿ December 13, 2024

    ಬೆಂಗಳೂರಿನಲ್ಲಿ ಮಳೆಯಿಂದಾಗುವ ಹಾನಿ ತಡೆಗಟ್ಟಲು 5000 ಕೋಟಿ ರೂ. ಗಳ ಶಾಶ್ವತ ಯೋಜನೆ: ಸಚಿವ ಕೃಷ್ಣ ಭೈರೇಗೌಡ

    By adminDecember 13, 2024No Comments2 Mins Read
    krishne byre gowda

    ಬೆಳಗಾವಿ ಸುವರ್ಣಸೌಧ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪ್ರದೇಶಗಳಲ್ಲಿ ಅತಿಹೆಚ್ಚು ಮಳೆಯಿಂದ ಪ್ರವಾಹ ರೀತಿಯಲ್ಲಿ ಉಂಟಾಗುವ ಅತಿವೃಷ್ಟಿಯ ಹಾನಿಯನ್ನು ತಡೆಗಟ್ಟಲು ಒಟ್ಟು 5,000 ಕೋಟಿ ರೂ. ಗಳ ಶಾಶ್ವತ ಯೋಜನೆಯನ್ನು ರೂಪಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಹೇಳಿದರು.

    ಪ್ರಸಕ್ತ ವರ್ಷ ರಾಜ್ಯದಲ್ಲಿ ಅಧಿಕ ಮಳೆಯಿಂದ ಉಂಟಾದ ಹಾನಿ ಕುರಿತಂತೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಶುಕ್ರವಾರ ಸರ್ಕಾರದ ಪರವಾಗಿ ಹೇಳಿಕೆ ನೀಡಿದರು.
    ಬೆಂಗಳೂರು ವ್ಯಾಪ್ತಿಯಲ್ಲಿ ಅತಿಹೆಚ್ಚು ಮಳೆ ಸುರಿದಾಗ ಪದೇ ಪದೇ ಹಾನಿಗೊಳಗಾಗುವ ಪ್ರದೇಶಗಳನ್ನು ಗುರುತಿಸಲಾಗಿದೆ. ಮಳೆ ಸುರಿದಂತಹ ಸಂದರ್ಭದಲ್ಲಿ ನೀರು ಸರಾಗವಾಗಿ ಹರಿಯುವಂತೆ ರಾಜಕಾಲುವೆ ಹಾಗೂ ವಸತಿ ಪ್ರದೇಶದಲ್ಲಿನ ಕಾಲುವೆಗಳನ್ನು ಪರಿಪಕ್ವವಾಗಿ ಸುಧಾರಿಸಲು ಕ್ರಮ ವಹಿಸಲಾಗಿದೆ. ಈ ವ್ಯಾಪ್ತಿಯಲ್ಲಿ 856 ಕಿ.ಮೀ. ರಾಜಕಾಲುವೆಗಳಿದ್ದು, ರಾಜಕಾಲುವೆ ಇಲ್ಲದ ಕಡೆ 200 ಕಿ.ಮೀ. ಕಿರು ಕಾಲುವೆಗಳು ಸೇರಿದಂತೆ ಒಟ್ಟು 1100 ಕಿ.ಮೀ. ಕಾಲುವೆಗಳಲ್ಲಿ ಹೆಚ್ಚಿನ ಮಳೆ ನೀರು ಸರಾಗವಾಗಿ ಹರಿಯುವಂತೆ ಮಾಡಲು ಶಾಶ್ವತ ಯೋಜನೆಯನ್ನು ರೂಪಿಸಲಾಗಿದೆ. ಈಗಾಗಲೆ 700 ಕಿ.ಮೀ. ಅಭಿವೃದ್ಧಿಪಡಿಸಲಾಗಿದ್ದು ಇನ್ನೂ 300 ಕಿ.ಮೀ. ರಾಜಕಾಲುವೆಯನ್ನು ಬರುವ ಒಂದು ವರ್ಷದ ಅವಧಿಯಲ್ಲಿ ಅಭಿವೃದ್ಧಿಪಡಿಸಲಾಗುವುದು, ಇದಕ್ಕಾಗಿ ಡಿಸಾಸ್ಟರ್ ಮಿಟಿಗೇಶನ್ ಫಂಡ್ ನಡಿ 240 ಕೋಟಿ ರೂ. ಒದಗಿಸಲಾಗುತ್ತಿದೆ ಎಂದರು.

    ರಾಜಕಾಲುವೆಗಳ ಅಭಿವೃದ್ದಿಗೆ 3 ಸಾವಿರ ಕೋಟಿ:

    ಬೆಂಗಳೂರಿನಲ್ಲಿ ಮಳೆ ಬಂದಾಗ ಪ್ರವಾಹ ತಡೆಗಟ್ಟುವ ನಿಟ್ಟಿನಲ್ಲಿ 5 ಸಾವಿರ ಕೋಟಿ ರೂ.ವೆಚ್ಚದಲ್ಲಿ ಶಾಶ್ವತ ಪರಿಹಾರ ಕ್ರಮಗಳನ್ನು ಸರಕಾರ ಕೈಗೊಳ್ಳುತ್ತಿದೆ.
    ಬೃಹತ್ ಬೆಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಮಳೆಯಿಂದಾಗುವ ಹಾನಿ ತಡೆಗಟ್ಟಲು ಒಂದು ಬಾರಿಯ ಶಾಶ್ವತ ಕಾಮಗಾರಿ ಕೈಗೊಳ್ಳಲು ವಿಶ್ವಬ್ಯಾಂಕ್ ನೆರವು ಪಡೆಯುವ ನಿಟ್ಟಿನಲ್ಲಿ ಈಗಾಗಲೆ 10 ಸುತ್ತಿನ ಸಭೆಗಳನ್ನು ನಡೆಸಲಾಗಿದೆ.

    ವಿಶ್ವಬ್ಯಾಂಕ್ನಿAದ 3000 ಕೋಟಿ ರೂ. ಸಾಲ ಪಡೆದು, ಬಿಬಿಎಂಪಿ ಮೂಲಕ 2000 ಕೋಟಿ ರೂ. ವೆಚ್ಚದಲ್ಲಿ ಎಲ್ಲ ರಾಜಕಾಲುವೆಗಳನ್ನು ಅಭಿವೃದ್ಧಿಪಡಿಸಲು ಯೋಜಿಸಲಾಗಿದೆ.
    ಬಿಬಿಎಂಪಿಗೆ ಹೊಸದಾಗಿ ಸೇರ್ಪಡೆಯಾಗಿರುವ 110 ಹಳ್ಳಿಗಳಲ್ಲಿ ಒಳಚರಂಡಿ ವ್ಯವಸ್ಥೆ ಇರದ ಕಡೆ ಒಳಚರಂಡಿ ವ್ಯವಸ್ಥೆಯನ್ನು ಸಮರ್ಪಕವಾಗಿ ರೂಪಿಸಿ ಸದರಿ ಒಳಚರಂಡಿ ನೀರು ನೇರವಾಗಿ ಸೀವೆಜ್ ಟ್ರೀಟ್ಮೆಂಟ್ ವಾಟರ್ ಲೈನ್ಗೆ ಸೇರ್ಪಡೆಯಾಗುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗಿದ್ದು, ಈ ಕಾರ್ಯಕ್ಕೆ ಬೆಂಗಳೂರು ಜಲಮಂಡಳಿಗೆ 01 ಸಾವಿರ ಕೋಟಿ ರೂ.ಗಳನ್ನು ಒದಗಿಸಲಾಗುತ್ತಿದೆ. ಇನ್ನಿತರೆ ಕಾಮಗಾರಿಗಳಿಗಾಗಿ 02 ಸಾವಿರ ಕೋಟಿ ರೂ. ಗಳನ್ನು ವೆಚ್ಚ ಮಾಡಲು ನಿರ್ಧರಿಸಲಾಗಿದೆ ಎಂದು ಸಚಿವರು ವಿವರಿಸಿದರು.
    ಇನ್ನುಳಿದ 2,000 ಕೋಟಿ ರೂ. ಗಳನ್ನು ರಾಜ್ಯ ಸರ್ಕಾರ ಭರಿಸಲು ನಿರ್ಧರಿಸಲಾಗಿದೆ.

    ಬೆಂಗಳೂರಿನಲ್ಲಿ ಮಳೆಯಿಂದ ಪದೇ ಪದೇ ಹಾನಿಗೀಡಾಗುವ ಪ್ರಮುಖ ರಸ್ತೆಗಳನ್ನು ಗುರುತಿಸಲಾಗಿದ್ದು, ಇಂತಹ ರಸ್ತೆಗಳನ್ನು ದುರಸ್ತಿಪಡಿಸಿ, ಡಾಂಬರೀಕರಣಗೊಳಿಸಲು 695 ಕೋಟಿ ರೂ. ಗಳ ಯೋಜನೆ ರೂಪಿಸಿ, ಸಚಿವ ಸಂಪುಟದ ಅನುಮೋದನೆ ಪಡೆದು ಈಗಾಗಲೆ ಟೆಂಡರ್ ಪ್ರಕ್ರಿಯೆ ಪ್ರಾರಂಭಿಸಲಾಗಿದೆ. ಒಟ್ಟಾರೆ ಬೆಂಗಳೂರಿನಲ್ಲಿ ಅತಿಯಾದ ಮಳೆಯಾದಾಗ ಹಾನಿಯಾಗುವುದನ್ನು ತಡೆಗಟ್ಟಲು ಸರ್ಕಾರ ಶಾಶ್ವತವಾದ ಯೋಜನೆಗಳನ್ನು ರೂಪಿಸಿದ್ದು, ಹಂತ ಹಂತವಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಸಚಿವ ಕೃಷ್ಣ ಭೈರೇಗೌಡ ಹೇಳಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಬೆಂಗಳೂರು ಮೆಟ್ರೋ ಮತ್ತಷ್ಟು ವಿಸ್ತರಣೆ; ಬಿಡದಿ, ತುಮಕೂರು, ಹೊಸಕೋಟೆ ಸೇರಿ 6 ಹೊಸ ಮಾರ್ಗಗಳಿಗೆ ಸಿದ್ಧತೆ!

    October 6, 2026

    ಬರದಿಂದ 46,000 ಕೋಟಿ ರೂ. ನಷ್ಟ, ಜಿಎಸ್‌ ಟಿ ಸಂಗ್ರಹದ ಮೇಲೂ ಗಂಭೀರ ಪರಿಣಾಮ: ಡಿಸಿಎಂ ಡಾ. ಜಿ. ಪರಮೇಶ್ವರ್

    October 5, 2026

    ಮುಂಬರುವ ಎಲ್ಲಾ ಚುನಾವಣೆಗಳನ್ನು ಬಿಜೆಪಿ — ಜೆಡಿಎಸ್ ಮೈತ್ರಿಯಾಗಿ ಎದುರಿಸಲಿವೆ: ಬಿ.ಎಸ್.ಯಡಿಯೂರಪ್ಪ

    October 5, 2026

    Comments are closed.

    Our Picks

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಅಕ್ಟೋಬರ್ ತಿಂಗಳ ಮಹತ್ವದ ತೆರಿಗೆ ಗಡುವುಗಳು: ತೆರಿಗೆದಾರರು ಹಾಗೂ ವೃತ್ತಿಪರರು ಗಮನಿಸಬೇಕಾದ ಶಾಸನಬದ್ಧ ನಿಯಮಾವಳಿಗಳು

    October 6, 2026

    ಲೇಖನ: ನಟರಾಜು ಜಿ.ಎಲ್. ಸಂಪಾದಕರು, ನಮ್ಮ ತುಮಕೂರು ಡಿಜಿಟಲ್ ಸುದ್ದಿ ಮಾಧ್ಯಮ ಪ್ರತಿಯೊಂದು ಆರ್ಥಿಕ ವರ್ಷದಲ್ಲೂ ಅಕ್ಟೋಬರ್ ಮಾಸವು ವ್ಯಾಪಾರಸ್ಥರು,…

    ಎತ್ತಿನಹೊಳೆ ನಾಲಾ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಎನ್‌.ಡಿ.ಎ ಮೈತ್ರಿಕೂಟದ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಆಗ್ರಹ

    October 6, 2026

    ಜನವರಿ ನಂತರವೂ ಮಳೆ ಬಾರದೇ ಇದ್ದರೆ ಜಿಲ್ಲೆಯಲ್ಲಿ ಗಂಭೀರ ಸಮಸ್ಯೆ: ತುಮಕೂರಿನಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿಕೆ

    October 6, 2026

    ₹58 ಸಾವಿರದಿಂದ ಬೈಕ್ ಖರೀದಿ; 70 ಕಿ.ಮೀ ಮೈಲೇಜ್ ನೀಡುವ 5 ಬಜೆಟ್ ಬೈಕ್‌ ಗಳಿವು!

    October 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.