ಕಲಬುರಗಿ: ಮುಸ್ಲಿಂ ಸಂಘಟನೆಗಳು ಹಿಜಾಬ್ ಧರಿಸಿ ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಬೇಕೆಂದು ಮನವಿ ಸಲ್ಲಿಸಿರುವುದನ್ನು ಪರಿಶೀಲನೆ ನಡೆಸಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಈ ಬಗ್ಗೆ ಮಾತನಾಡಿದ ಅವರು, ಕಾನೂನಾತ್ಮಕವಾಗಿ ಯಾವ ಸಾಧ್ಯತೆಗಳಿವೆ, ಸಂವಿಧಾನದಲ್ಲಿ ಯಾವೆಲ್ಲಾ ಅವಕಾಶಗಳಿವೆ ಎಂಬುದನ್ನು ಪರಾಮರ್ಶಿಸಿ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದರು.
ರಂಜಾನ್ನ ಅವಧಿಯಲ್ಲಿ ಇಫ್ತಿಯಾರ್ನಲ್ಲಿ ಭಾಗವಹಿಸಲು ಮುಸ್ಲಿಂ ಸರ್ಕಾರಿ ನೌಕರರಿಗೆ ಸಮಯದ ವಿನಾಯಿತಿ ನೀಡಬೇಕು ಎಂಬ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4