ಬೆಂಗಳೂರು: ಉರಿಗೌಡರು ನಂಜೇಗೌಡರು ಟಿಪ್ಪುವನ್ನು ಕೊಂದಂತೆ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಬೇಕು ಎಂದು ಸಿದ್ದರಾಮಯ್ಯವಿರುದ್ಧ ಮಾಜಿ ಸಚಿವ ಅಶ್ವತ್ಥ ನಾರಾಯಣ ಹೇಳಿಕೆಗೆ ಅಶ್ವತ್ಥ ನಾರಾಯಣ ಪ್ರತಿಕ್ರಿಯೆ ನೀಡಿದ್ದಾರೆ. ಈ ವಿಚಾರದಲ್ಲಿ ಸಿದ್ದರಾಮಯ್ಯ ಅವರಿಗೆ ಇದ್ದ ಟಿಪ್ಪು ಪ್ರೇಮವನ್ನು ಖಂಡಿಸಿದ್ದೇನೆ.
ಕಾಂಗ್ರೆಸ್ ಪಕ್ಷವನ್ನು ಚುನಾವಣೆಯಲ್ಲಿ ಸೋಲಿಸಬೇಕು ಎಂಬ ಚಿಂತನೆಯಲ್ಲಿ ಹೇಳಿದ್ದೆ. ವೈಯಕ್ತಿಕವಾಗಿ ನನಗೆ ಸಿದ್ದರಾಮಯ್ಯ ಮೇಲೆ ಗೌರವ ಇದೆ. ಸೈದ್ದಾಂತಿಕವಾಗಿ ನಮಗೂ ಅವರಿಗೂ ಬಹಳ ವ್ಯತ್ಯಾಸ ಇದೆ. ನಾನು ಸದನದಲ್ಲಿ ಕೂಡಾ ಸ್ಪಷ್ಟವಾಗಿ ಹೇಳಿಕೆ ಕೊಟ್ಟಿದ್ದೇನೆ ಎಂದರು.
ನನ್ನ ರಾಜಕೀಯ ಜೀವನದಲ್ಲಿ ಇದುವರೆಗೂ ಯಾರಿಗೂ ಹಾನಿ ಮಾಡಿಲ್ಲ. ಸಿದ್ದರಾಮಯ್ಯ ಮನಸ್ಸಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುವುದಾಗಿಯೂ ಹೇಳಿದ್ದೆ. ಇದ್ದಕ್ಕಿದ್ದಂತೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆಯೇ ನನ್ನ ಹೇಳಿಕೆಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ.
ಸಿಎಂ ಮತ್ತು ಡಿಸಿಎಂ ಸಭೆ ತೆಗೆದುಕೊಂಡು ಪೊಲೀಸರಿಗೆ ಯಾಕೆ ಕೇಸ್ ದಾಖಲು ಮಾಡಿಲ್ಲ ಎಂದು ಕೇಳಿದ್ದಾರೆ. ಅದನ್ನು ಕೊಲೆ ಯತ್ನ ಎಂದು ಬಿಂಬಿಸಿದ್ದಾರೆ. ಅವರ ಗ್ಯಾರಂಟಿ ಅನುಷ್ಠಾನ ಮಾಡುವುದು ಬಿಟ್ಟು, ಸಮಯವನ್ನು ದ್ವೇಷದ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.


