ತುಮಕೂರು: ಬೇರೆ ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಹೆಚ್ಚಿನ ತೆರಿಗೆ ವಿಧಿಸಲಾಗುತ್ತಿದೆ ಎಂದು ಪ್ರಸ್ತುತ ಬೆಲೆ ಏರಿಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿರುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.
ತುಮಕೂರಿನ ಸಿದ್ದಗಂಗಾ ಮಠಕ್ಕೆ ಆಗಮಿಸಿ ಶ್ರೀ ಶಿವಕುಮಾರ ಸ್ವಾಮೀಜಿಯವರ ದರ್ಶನ ಪಡೆದರು ನಂತರ ಶ್ರೀ ಸಿದ್ದಲಿಂಗ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದರು. ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದರು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪೆಟ್ರೋಲ್ ಡೀಸೆಲ್ ದರ ಏರಿಕೆ, ವಿದ್ಯುತ್ ದರ ಏರಿಕೆ, ಸ್ಟ್ಯಾಂಪ್ ಡ್ಯೂಟಿ ದರ ಏರಿಕೆ ಆರ್ಥಿಕ ಸಂಪನ್ಮೂಲವನ್ನು ಕ್ರೂಡೀಕರಿಸಲಾಗಿದ್ದು ಅದೆಲ್ಲವನ್ನು ಯಾವ ರೀತಿ ಬಳಸಿಕೊಳ್ಳುತ್ತಿದೆ, ಇನ್ನೊಂದೆಡೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಕೋಟ್ಯಂತರ ರೂಪಾಯಿ ಹಣ ವರ್ಗಾವಣೆ ಮಾಡಿಸಿ ಅದನ್ನು ಲೋಕಸಭಾ ಚುನಾವಣೆಗೆ ಬಳಸಿಕೊಳ್ಳಲಾಗಿದೆ. ಇದರ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆತ್ಮವಲೋಕನ ಮಾಡಿಕೊಳ್ಳಬೇಕಿದೆ ಎಂದು ಹೇಳಿದರು.
ತೈಲಬೆಲೆ ಏರಿಕೆ ಒಂದು ರೀತಿ ರೈತ ಸಮುದಾಯದ ಮೇಲೆ ಪರೋಕ್ಷ ಪರಿಣಾಮ ಬೀರುತ್ತಿದೆ. ಪಂಪ್ ಸೆಟ್ ಗೆ, ಟ್ರ್ಯಾಕ್ಟರ್ ಗೆ ಡೀಸೆಲ್ ಬಳಸುತ್ತಾರೆ, ಹೀಗಾಗಿ ಈ ಪರಿಸ್ಥಿತಿಯನ್ನು ಸಿದ್ದರಾಮಯ್ಯ ಅವರು ಮನಗಣಬೇಕಿದೆ ಎಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


