ಬೆಂಗಳೂರು: ನಾಳೆ ಬೆಂಗಳೂರಿನಲ್ಲಿ ಪೆಟ್ರೋಲ್ ಬಂಕ್ ಮಾಲಿಕರು ಮುಷ್ಕರ ನಡೆಸಲು ನಿರ್ಧರಿಸಿದ್ದು , ಈ ಹಿನ್ನೆಲೆಯಲ್ಲಿ ಪೆಟ್ರೋಲ್ ಡೀಸೆಲ್ ಪೂರೈಕೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆಗಳಿವೆ.
ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪೆಟ್ರೋಲ್ ಬಂಕ್ ಮಾಲೀಕರು ಮುಷ್ಕರಕ್ಕೆ ಕರೆ ಕೊಟ್ಟಿದ್ದು, ಪೆಟ್ರೋಲ್, ಡೀಸೆಲ್ ಖರೀದಿ ಬಂದ್ ಮಾಡಲಿದ್ದಾರೆ. ಬಂಕ್ ನಲ್ಲಿ ಸ್ಟಾಕ್ ಇರುವ ಪೆಟ್ರೋಲ್, ಡೀಸೆಲ್ ಮಾತ್ರ ಮಾರಾಟ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ಎರಡು ಬಾರಿ ಪೆಟ್ರೋಲ್, ಡೀಸೆಲ್ ಮೇಲಿನ ಟ್ಯಾಕ್ಸ್ ಕಡಿತಗೊಳಿಸಿದೆ. ನಾವು ಖರೀದಿಸಿದ್ದ ತೈಲಕ್ಕೆ ನೀಡಿದ್ದ ತೆರಿಗೆ ಮರುಪಾವತಿ ಮಾಡಿಲ್ಲ. ಹೀಗಾಗಿ ಪ್ರತಿ ಡೀಲರ್ ಗೆ 7-8 ಲಕ್ಷ ನಷ್ಟವಾಗಿದೆ. ತೈಲ ಕಂಪನಿಗೆ ಮೊದಲೇ ಕಟ್ಟಿದ್ದ ತೆರಿಗೆ ಮರುಪಾವತಿಸಬೇಕು. ಬೇಡಿಕೆಗೆ ತಕ್ಕಂತೆ ಪೆಟ್ರೋಲ್, ಡೀಸೆಲ್ ಪೂರೈಸಬೇಕು ಎಂದು ಮಾಲೀಕರು ಆಗ್ರಹಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5


