ಶಿವಮೊಗ್ಗದಲ್ಲಿ ಕೆಲವರಿಂದ ಶಾಂತಿ ಕದಡುವ ಕೆಲಸವಾಗುತ್ತಿದೆ. ಮುಸ್ಲೀಂ ಗೂಂಡಾಗಳಿಗೆ ಇನ್ನೂ ಬುದ್ಧಿ ಬಂದಂತೆ ಕಾಣುತ್ತಿಲ್ಲ. ಪಿಎಫ್ ಐ ಇನ್ನೂ ಜೀವಂತವಿದೆ ಎಂದು ತೋರಿಸಲು ಹೊರಟಿದ್ದೀರಾ..? ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದರು.
ಶಿವಮೊಗ್ಗದಲ್ಲಿ ಇಂದು ಮಾತನಾಡಿದ ಕೆ.ಎಸ್ ಈಶ್ವರಪ್ಪ, ಸಾವರ್ಕರ್ ಕಾರ್ಯಕ್ರಮದಲ್ಲಿ ಯಾವುದೇ ಗೊಂದಲವಾಗಿಲ್ಲ. ಸಾವರ್ಕರ್ ಮೊಮ್ಮಗ ಎಲ್ಲೂ ಪ್ರಚೋದನಾಕಾರಿ ಹೇಳಿಕೆ ನೀಡಿಲ್ಲ. ನಿನ್ನೆ ಪ್ರಕಾಶ್ ಎಂಬಾತನ ಮೇಲೆ ಹಲ್ಲೆಯಾಗಿದೆ. ಹರ್ಷ ಅವರ ಕುಟುಂಬಕ್ಕೆ ಬೆದರಿಕೆ ಹಾಕಿದ್ದಾರೆ. ಹೇಡಿಗಳಂತೆ ನಿನ್ನೆ ಗಲಾಟೆ ಮಾಡಿದ್ದಾರೆ. ಶಾಂತಿ ಕದಡುವ ಉದ್ಧೇಶದಿಂದ ಹೀಗೆ ಮಾಡುತ್ತಿದ್ದಾರೆ.
ಮುಸ್ಲಿಂ ಗೂಂಡಾಗಳಿಗೆ ಶಿವಮೊಗ್ಗದಲ್ಲಿ ಪೊಲೀಸರ ಭಯ ಇಲ್ಲ ಎಂದು ಆಕ್ರೋಶ ಹೊರ ಹಾಕಿದರು. ಪಿಎಫ್ ಐ ಜೀವಂತಿವಿದೆ ಎಂದು ತೋರಿಸಲು ಹೊರಟಿದ್ದೀರಾ..? ಇಂತಹ ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಪಿಎಫ್ ಐ ಇನ್ನೂ ಜೀವಂತವಿದೆಯಾ ಎಂದು ಪತ್ತೆ ಹಚ್ಚಬೇಕಿದೆ. ಕೇಂದ್ರ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುವ ವಿಶ್ವಾಸವಿದೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


