ಭಾರತೀಯ ವಿಜ್ಞಾನ ಸಂಸ್ಥೆ(ಐಐಸಿ) ಕ್ಯಾಂಪಸ್ ನಲ್ಲಿ 2022ನೇ ಶೈಕ್ಷಣಿಕ ವರ್ಷದ ಪಿಹೆಚ್ ಡಿ ವಿದ್ಯಾರ್ಥಿ ಡೈಮೊಂಡ್ ಖುಷ್ಟಾ ಆತ್ಮಹತ್ಯೆಗೆ ಶರಣಾಗಿದ್ದಾನೆ.
ನಿನ್ನೆ ಬೆಳಿಗ್ಗೆ 10 ಘಂಟೆಯ ಸುಮಾರಿಗೆ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದು, ಆತ್ಮಹತ್ಯೆಗೆ ನಿಖರವಾದ ಕಾರಣವೇನು? ಎಂಬುದು ಈವರೆಗೂ ತಿಳಿದು ಬಂದಿಲ್ಲ.
ಇನ್ನು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಯ ಮೃತ ದೇಹವನ್ನು ಎಂ. ಎಸ್. ರಾಮಯ್ಯ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ.


