ನವದೆಹಲಿ: ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ಸಂಭವಿಸಿ 30 ಮಂದಿ ಮೃತಪಟ್ಟು, 60 ಮಂದಿ ಗಾಯಗೊಂಡಿರುವುದಕ್ಕೆ ಉತ್ತರ ಪ್ರದೇಶದ ನಿರ್ಲಕ್ಷ್ಯ ಮತ್ತು ಆಡಳಿತದ ಸಂಪೂರ್ಣ ವೈಫಲ್ಯವೇ ಕಾರಣ ಎಂದು ಆರೋಪಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ.
ಆಯಾ ರಾಜ್ಯಗಳಿಂದ ಕುಂಭಕ್ಕೆ ಪ್ರಯಾಣಿಸುವ ಜನರ ಸುರಕ್ಷತೆ ಮತ್ತು ಭದ್ರತೆಯ ಖಾತ್ರಿಗೆ ಎಲ್ಲಾ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಬೇಕು ಎಂದು ವಕೀಲ ವಿಶಾಲ್ ತಿವಾರಿ ಅವರು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಮಹಾಕುಂಭ ಮೇಳಕ್ಕೆ ಆಗಮಿಸುವ ಎಲ್ಲಾ ಭಕ್ತರ ಸುರಕ್ಷತೆ ಮತ್ತು ಭದ್ರತೆ ಖಾತ್ರಿಗೆ ಎಲ್ಲಾ ರಾಜ್ಯಗಳಿಗೆ ನಿರ್ದೇಶನ ನೀಡಬೇಕು. ಎಲ್ಲಾ ರಾಜ್ಯಗಳು ಪ್ರಯಾಗ್ ರಾಜ್ ನಲ್ಲಿ ಸರಿಯಾದ ಸೌಲಭ್ಯ ಕೇಂದ್ರ ಸ್ಥಾಪಿಸಬೇಕು. ಈ ಕೇಂದ್ರಗಳು ತಮ್ಮ ರಾಜ್ಯಗಳಿಂದ ಬರುವ ಜನರಿಗೆ ಸುರಕ್ಷತಾ ಕ್ರಮಗಳು ಮತ್ತು ಮಾರ್ಗಸೂಚಿಗಳ ಬಗ್ಗೆ ಮೂಲಭೂತ ಮಾಹಿತಿಯನ್ನು ಒದಗಿಸಬೇಕು. ಒಂದು ವೇಳೆ ತುರ್ತು ವೇಳೆಯಲ್ಲಿ ನೆರವು ಕಲ್ಪಿಸಲು ಸಿದ್ಧರಾಗಬೇಕು ಎಂದು ಅವರು PILನಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4