ಗುಬ್ಬಿ: ಸಿ.ಎಸ್.ಪುರ ನಾಡ ಕಚೇರಿಯಲ್ಲಿ ಪಿಂಚಣಿ ಅದಾಲತ್ ಕಾರ್ಯಕ್ರಮ ಜರುಗಿತು. ಕಾರ್ಯ ಕ್ರಮದ ಕುರಿತು ಪ್ರತಿಕ್ರಿಯೆ ನೀಡಿದ ನಾಡ ಕಛೇರಿಯ ಉಪತಹಶೀಲ್ದಾರ್ ಮುತ್ತುರಾಜ್ , ಕಂದಾಯ ಇಲಾಖೆ ಹಾಗೂ ಪಿಂಚಣಿ ನಿರ್ದೇಶನಾಲಯದ ಆದೇಶದಂತೆ ಜನತೆಯ ಮನೆ ಬಾಗಿಲಿಗೆ ಸೇವೆ ನೀಡುವ ಉದ್ದೇಶದಿಂದ ಪಿಂಚಣಿ ಅದಾಲತ್ ಕಾರ್ಯಕ್ರಮ ಮಾಡಲಾಗುತ್ತಿದ್ದು, ನಮ್ಮ ಕಂದಾಯ ಇಲಾಖೆಯ ಅಧಿಕಾರಿಗಳೇ ವಯೋವೃದ್ದರ ಮನೆ ಬಾಗಿಲಿಗೆ ತೆರಳಿ ಸಂಬಂಧ ಪಟ್ಟ ವಯಸ್ಸಿನ ದೃಢೀಕರಣ ಪಡೆದು ಮೊಬೈಲ್ ಆಪ್ ಮೂಲಕ ದಾಖಲೆ ಕ್ರೋಢೀಕರಿಸಿ ಅರ್ಹ ಫಲಾನುಭವಿಗಳಿಗೆ ಸ್ಥಳದಲ್ಲಿ ಪಿಂಚಣಿ ಮಂಜೂರಾತಿ ಪತ್ರಗಳನ್ನು ವಿತರಣೆ ಮಾಡುತ್ತಾರೆ ಎಂದರು.
ಸಾರ್ವಜನಿಕ ಮತ್ತು ವಯೋವೃದ್ದರು ಇನ್ನೂ ಮುಂದೆ ಕಛೇರಿಗಳಿಗೆ ಭೇಟಿ ನೀಡುವ ಮತ್ತು ದಾಖಲೆ ಒದಗಿಸುವ ತೊಂದರೆ ತಪ್ಪಲಿದ್ದು, ನಮ್ಮ ಹೋಬಳಿಯ ಕಂದಾಯ ಇಲಾಖೆ ಗ್ರಾಮಲೆಕ್ಕಾಧಿಕಾರಿಗಳು ಆಯಾ ವೃತ್ತಗಳಿಗೆ ಭೇಟಿ ನೀಡಿ ಸರ್ಕಾರದ ಈ ಯೋಜನೆಯನ್ನು ಅನುಷ್ಠಾನಗೊಳಿಸಲಿದ್ದಾರೆ ಎಂದು ತಿಳಿಸಿದರು.
ಈ ವೇಳೆಯಲ್ಲಿ ಕೆಲ ಹೋಬಳಿಯ ಫಲಾನುಭವಿಗಳಿಗೆ ಪಿಂಚಣಿ ಮಂಜೂರಾತಿ ಆದೇಶ ಪತ್ರವನ್ನು ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಕಂದಾಯ ನಿರೀಕ್ಷಕ ಶ್ರೀನಿವಾಸ್ ಹಾಗೂ ಗ್ರಾಮಲೆಕ್ಕಾಧಿಕಾರಿ ಗಳು ಹಾಜರಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy