ಬೆಂಗಳೂರು: ಜಾನಪದ ಕ್ಷೇತ್ರದಲ್ಲಿನ ಅಪೂರ್ವ ಕೊಡುಗೆಗಾಗಿ ಭಾರತ ಸರ್ಕಾರದ ಪ್ರತಿಷ್ಟಿತ ಪ್ರಶಸ್ತಿಯಾದ ಪದ್ಮಶ್ರೀ ಗೆ ಭಾಜನರಾಗಿರುವ ನಾಡಿನ ಹಿರಿಯ ತಮಟೆ ಕಲಾವಿದರಾದ ಪಿಂಡಿಪಾಪನಹಳ್ಳಿ ನಾಡೋಜ ಮುನಿವೆಂಕಟಪ್ಪ ಅವರನ್ನು ಅದ್ದೂರಿ ಸಮಾರಂಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಬೆಂಗಳೂರಿನ ರವೀಂದ್ರ ಕಲಾಭವನದ ಹಿಂಭಾಗದ ಸಂಸ ಬಯಲು ಮಂದಿರದಲ್ಲಿ ಸಂಜೆ ನಡೆದ ಕಾರ್ಯಕ್ರಮ ಜಾನಪದ ಹಾಡುಗಳ ಆಹ್ಲಾದಕರ ವಾತಾವರಣದಲ್ಲಿ ವಿಜೃಂಭಣೆಯಿಂದ ಕೂಡಿತ್ತು.
ಪದ್ಮ ಪ್ರಶಸ್ತಿಗೆ ಭಾಜನರಾಗಿರುವ ನಾಡೋಜ ಮುನಿವೆಂಕಟಪ್ಪನವರಿಗೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಗಣ್ಯರು ಶುಭ ಹಾರೈಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


