ಕೆಲವೇ ದಿನಗಳಲ್ಲಿ ಸಪ್ತಪತಿ ತುಳಿದು ಹೊಸ ಬದುಕಿನ ಕನಸು ಕಾಣುತ್ತಿದ್ದ ಯುವತಿಗೆ ಪ್ರೀಯತಮನ ಸಾವಿನ ಸುದ್ದಿ ಅರಗಿಸಿಕೊಳ್ಳಲಾಗದೆ ಪ್ರಿಯತಮೆಯು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ತುಮಕೂರಿನ ಅರೆಹಳ್ಳಿಯಲ್ಲಿ ಎಂಬಲ್ಲಿ ನಡೆದಿದೆ.
ಧನುಷ್ (23), ಸುಷ್ಮಾ (22) ಎಂಬವರು ಮೃತ ದುರ್ದೈವಿಗಳು. ಇವರು ತುಮಕೂರು ತಾಲೂಕಿನ ಮಸ್ಕಲ್ ಗ್ರಾಮದವರಾಗಿದ್ದು, ಎರಡು ವರ್ಷಗಳಿಂದ ಇಬ್ಬರು ಪ್ರೀತಿಸುತ್ತಿದ್ದು ಮದುವೆಗೆ ಮನೆಯವರನ್ನೂ ಒಪ್ಪಿಸಿದ್ದರು.
ಮೇ 11ರಂದು ಊರಿನ ಜಾತ್ರೆಗೆ ಬರುವ ವೇಳೆ ನೆಲಮಂಗಲ ಕುಲಾನಹಳ್ಳಿ ಬಳಿ ಅಪಘಾತ ನಡೆದಿದ್ದು ಧನುಷ್ ಸ್ಥಳದಲ್ಲೇ ಮೃತಪಟ್ಟಿದ್ದ. ಧನುಷ್ ಸಾವಿನ ಸುದ್ದಿ ಕೇಳಿ ಸುಷ್ಮಾ ಆಘಾತಗೊಂಡಿದ್ದಳು.
ಧನುಷ್ ಅಗಲಿಕೆಯ ನೋವಿನಿಂದ ಹೊರಬರಲು ಸಾಧ್ಯವಾಗದೆ ಆಕೆಯು ಆತ್ಮಹತ್ಯೆ ಹಾದಿ ತುಳಿದಿದ್ದಾಳೆ. ವಿಷ ಸೇವಿಸಿದ್ದ ಸುಷ್ಮಾಳನ್ನು ಆಸ್ಪತ್ರೆಗೆ ದಾಖಲಿಸಿದ್ದರೂ ಆಕೆಯನ್ನು ಬದುಕಿಸಲು ಸಾಧ್ಯವಾಗಲಿಲ್ಲ.ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB