ಅಹ್ಮದಾಬಾದ್: ಗುಜರಾತ್ ರಾಜಧಾನಿ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ವಿಮಾನ ಅಪಘಾತಕ್ಕೀಡಾಗಿದ್ದು, ಇಡೀ ವಿಮಾನ ನಿಲ್ದಾಣದಾದ್ಯಂತ ದಟ್ಟ ಹೊಗೆ ಆವರಿಸಿದೆ.
ಗುಜರಾತ್ನ ಅಹಮದಾಬಾದ್ ನಲ್ಲಿ ವಿಮಾನ ಪತನಗೊಂಡಿದ್ದು, ಅಹಮದಾಬಾದ್ ಏರ್ಪೋರ್ಟ್ ಬಳಿ ಟೇಕ್ ಆಫ್ ಆಗುತ್ತಿದ್ದಏರ್ ಇಂಡಿಯಾ ವಿಮಾನ ಏಕಾಏಕಿ ವಿಮಾನ ಪತನಗೊಂಡ ಪರಿಣಾಮ ದಟ್ಟವಾದ ಹೊಗೆ ಕಾಣಿಸಿಕೊಂಡಿದೆ.
ಏರ್ ಪೋರ್ಟ್ ಬಳಿ ಮೇಧಿನಿ ನಗರ್ನಲ್ಲಿ ಈ ಘಟನೆ ಸಂಭವಿಸಿದೆ. ಬೋಯಿಂಗ್ 787–8 ಡ್ರೀಮ್ಲೈನರ್ ವಿಮಾನವು 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಸೇರಿದಂತೆ 242 ಜನರೊಂದಿಗೆ ಲಂಡನ್ಗೆ ತೆರಳುತ್ತಿತ್ತು. ವಿಮಾನವು ನಗರದ ವಿಮಾನ ನಿಲ್ದಾಣದಿಂದ ಸ್ವಲ್ಪ ದೂರದಲ್ಲಿರುವ ಫೋರೆನ್ಸಿಕ್ ಕ್ರಾಸ್ ರಸ್ತೆಯ ಬಳಿ ಪತನಗೊಂಡಿತು ಎನ್ನಲಾಗಿದೆ.
ಟೇಕ್ ಆಫ್ ಆಗುತ್ತಿದ್ದಂತೆ ವಿಮಾನ ಪತನವಾಗಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳ ಧಾವಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಘಟನಾ ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿದ್ದು, ವಿಮಾನದಲ್ಲಿದ್ದ ಪ್ರಯಾಣಿಕರ ಪೈಕಿ ಹಲವು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ವಿಮಾನದ ಪ್ರಕಾರದ ಕುರಿತು ಅಧಿಕಾರಿಗಳು ಇನ್ನೂ ವಿವರಗಳನ್ನು ನೀಡಿಲ್ಲ. ಘಟನೆ ಮಧ್ಯಾಹ್ನ 1 ರಿಂದ 2 ಗಂಟೆಯ ನಡುವೆ ಸಂಭವಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW