ಕೊರಟಗೆರೆ : ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ತೋವಿನಕೆರೆ ವಲಯದ ಕುರಂಕೋಟೆ ಗ್ರಾಮದ ಶ್ರೀ ದೊಡ್ಡಕಾಯಪ್ಪ (ಆಂಜನೇಯ) ಸ್ವಾಮಿ ದೇವಾಲಯದ ಗುಂಡು ಟೋಪಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಟ್ರಸ್ಟ್ ವತಿಯಿಂದ ಗಿಡ ನಾಟಿ ಮಾಡುವ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.
ಕ್ಷೇತ್ರದ ಶ್ರೀ ದೊಡ್ಡಕಾಯಪ್ಪ (ಆಂಜನೇಯ) ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಜಿಲ್ಲಾ ನಿರ್ದೇಶಕ ಪ್ರವೀಣ್ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಕುರಂಕೋಟೆ ಗ್ರಾಮದ ದೇವಾಲಯದ ಆವರಣದ ಗುಂಡು ಟೋಪಿನಲ್ಲಿ ಕಳೆದ ನಾಲ್ಕು ತಿಂಗಳ ಹಿಂದೆ ಸುಮಾರು 2 ಲಕ್ಷದ 80 ಸಾವಿರ ರೂಗಳ ವೆಚ್ಚದಲ್ಲಿ ಕೆರೆ ಅಭಿವೃದ್ಧಿ ಕಾರ್ಯ ಮಾಡಲಾಗಿತ್ತು.
ಪ್ರತಿ ವರ್ಷ ಟ್ರಸ್ಟ್ ವತಿಯಿಂದ ದಶ ಲಕ್ಷ ಗಿಡಗಳನ್ನ ನಾಟಿ ಮಾಡುವ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಪರಿಸರ ಸಂರಕ್ಷಣೆ ಮಾಡುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ನಿರ್ದೇಶಕರಾದ ಪ್ರವೀಣ್ ತಿಳಿಸಿದರು.
ನಂತರ ಮಾತನಾಡಿದ ಜನ ಜಾಗೃತಿ ವೇದಿಕೆಯ ರಾಜೇಶ್ವರಿ, ಸಂಘದ ಧ್ಯೇಯೋದ್ದೇಶ ಮತ್ತು ಕಾರ್ಯಗಳ ಬಗ್ಗೆ ಸಂಘದ ಪದಾಧಿಕಾರಿಗಳಿಗೆ ಮತ್ತು ಸ್ಥಳೀಯರಿಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ನಿರ್ದೇಶಕರಾದ ಪ್ರವೀಣ್, ದೊಡ್ಡಕಾಯಪ್ಪ ದೇವಾಲಯದ ಟ್ರಸ್ಟ್ ಅಧ್ಯಕ್ಷರಾದ ಸಿದ್ದರಾಜ್, ಜನ ಜಾಗೃತಿ ವೇದಿಕೆಯ ರಾಜೇಶ್ವರಿ, ತಾಲ್ಲೂಕು ಯೋಜನಾಧಿಕಾರಿ ಅನಿತಾ, ಮಹೇಂದ್ರ ಪ್ರಸಾದ್, ಪಾಂಡುರಂಗಯ್ಯ, ಗ್ರಾಮಸ್ಥರಾದ ಶಿವಯ್ಯ, ಶಿವಲಿಂಗಯ್ಯ, ಸಿದ್ದಯ್ಯ, ನಾಗಭೂಷಣ, ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC