ತುರುವೇಕೆರೆ: ತುಮಕೂರು ಜಿಲ್ಲೆ ತುರುವೇಕೆರೆ ಪಟ್ಟಣದ ವಾಸವಿ ಕಲ್ಯಾಣ ಮಂದಿರದಲ್ಲಿ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರಾದ ಪಿಎಂ ಬಾಲಸುಬ್ರಮಣ್ಯಂ ಅವರು ಉದ್ಘಾಟನೆ ಮಾಡಿದರು.
ಬಳಿಕ ಮಾತನಾಡಿದ ಅವರು, ಪ್ಲಾಸ್ಟಿಕ್ ಮುಕ್ತ ಪಟ್ಟಣ ಮಾಡಲು ಪ್ರತಿಯೊಬ್ಬರೂ ಸಹಕರಿಸಬೇಕು. ಪ್ಲಾಸ್ಟಿಕ್ ಕವರ್ ಪ್ಲಾಸ್ಟಿಕ್ ಲೋಟಗಳಲ್ಲಿ ಬಿಸಿ ಪದಾರ್ಥಗಳನ್ನು ಹಾಕುವುದನ್ನು ನಿಲ್ಲಿಸಬೇಕು. ಇಲ್ಲವಾದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ತಹಶೀಲ್ದಾರ್ ನಹಿಮ್ ಉನ್ನಿಸ್ಸಾ ಮಾತನಾಡಿ, ಎಲ್ಲಾ ಕಚೇರಿ ಮತ್ತು ಅಂಗಡಿ ಮತ್ತು ಹೋಟೆಲ್ ಗಳಲ್ಲಿ ಪ್ಲಾಸ್ಟಿಕ್ ಉತ್ಪನ್ನಗಳ ಬಳಕೆ ಮಾಡದಂತೆ ಆದೇಶಿಸಬೇಕು ಎಂದು ಹೇಳಿದರು.
ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಶೇಖರ್ ಮಾತನಾಡಿ, ಸುರಕ್ಷತೆ ಸಂರಕ್ಷಣೆಯ ಪರವಾಗಿ ಪರವಾನಗಿಯನ್ನು ತಾಲೂಕು ಆರೋಗ್ಯ ಅಧಿಕಾರಿ ಅವರಿಂದ ಅಧಿಕೃತವಾಗಿ ಪಡೆದು ಸಂಬಂಧಪಟ್ಟ ಬಿಲ್ಲುಗಳನ್ನು ಇಟ್ಟುಕೊಳ್ಳುವುದಕ್ಕೆ ತಿಳಿಸಿದರು.
ಕಾರ್ಯಕ್ರಮದಲ್ಲಿ ತಾಲೂಕಿನ ವರ್ತಕರ ಸಂಘದ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಆಹಾರ ಶಿರಸ್ತೆದಾರರಾದ ಪ್ರೇಮ ಆಹಾರ ನಿರೀಕ್ಷಕ ಕೃಷ್ಣೇಗೌಡ ಸಂಪನ್ಮೂಲ ವ್ಯಕ್ತಿ ಪ್ರಾಧ್ಯಾಪಕ ಗಂಗಾಧರ್ ಉಪಾಧ್ಯಕ್ಷ ಜಗನ್ನಾಥ್ ಗಂಡಿನವರು ಸದಸ್ಯರುಗಳಾದ ಡಿಪಿ ನಂದೀಶ್ ನಟರಾಜ್ ಹರೀಶ್ ಶ್ರೀನಿವಾಸ್ ಚಂದ್ರಣ್ಣ ಮತ್ತು ರಾಮಣ್ಣ ಸೇರಿದಂತೆ ವರ್ತಕರು ಭಾಗವಹಿಸಿದರು.
ವರದಿ :ಸುರೇಶ್ ಬಾಬು.ಎಂ ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy