ಪಾವಗಡ: ತಾಲ್ಲೂಕಿನ ಅರಸೀಕೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ 155 ನೇ ಗಾಂಧಿ ಜಯಂತಿ ಮತ್ತು 120 ನೇ ಲಾಲ್ ಬಹಾದ್ದೂರ್ ಶಾಸ್ತ್ರಿ ರವರ ಜನ್ಮ ದಿನಾಚರಣೆ ಪ್ರಯುಕ್ತ ಸುಂದರ್ ಲಾಲ್ ಬಹುಗುಣ ಎಕೋ ಕ್ಲಬ್ ನ ಆಶ್ರಯದಲ್ಲಿ ಶಾಲಾ ಆವರಣದಲ್ಲಿ “ಪ್ಲಾಸ್ಟಿಕ್ ಮುಕ್ತ ಭಾರತ ನಮ್ಮ ಧ್ಯೇಯ” ಮತ್ತು “ಸ್ವಚ್ಚತೆಯೆ–ಸೇವೆ” ಎಂಬ ಕಾರ್ಯ ಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.
ಮೊದಲಿಗೆ ಶಾಲಾ ಆವರಣವನ್ನು ಸ್ವಚ್ಚಗೊಳಿಸಲಾಯಿತು. ನಂತರ ಮಹತ್ಮಾ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ರವರ ಭಾವಚಿತ್ರಕ್ಕೆ ಪೂಜಾ ಕಾರ್ಯವನ್ನು ನೆರವೇರಿಸಿ ನಂತರ ವಿದ್ಯಾರ್ಥಿಗಳಿಂದ ಭಾಷಣ ಸ್ಪರ್ಧೆಯನ್ನು ಏರ್ಪಡಿಸಿಲಾಗಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ನೀಡಲಾಯಿತು.
ಕಾರ್ಯಕ್ರಮದಲ್ಲಿ ಪ್ರಭಾರಿ ಮುಖ್ಯಶಿಕ್ಷಕರಾದ ರೇಣುಕರಾಜ್ ಜಿ.ಹೆಚ್., ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ಗುರುರಾಜ್ ಮತ್ತು ಸಹಶಿಕ್ಷಕರಾದ ಹನುಮೇಶ್ ಎನ್., ಮೋಹನ್ ಕುಮಾರ್ ಜಿ.ಕೆ., ಕುಮಾರ್ ಎಸ್., ಅಭಿಷೇಕ್ ಸಹ ಶಿಕ್ಷಿಕಿಯರಾದ ವಿಮಲಾ ಆರ್., ರಶ್ಮೀ ಸಿ.ಎಸ್., ಮಾನಸ ಎನ್. ಮತ್ತು ಶ್ರೀಲಕ್ಷ್ಮೀ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296