ತುಮಕೂರು: ಗುಬ್ಬಿ ತಾಲ್ಲೂಕಿನ ಬಿದರೆಹಳ್ಳ ಕಾವಲ್ ಬಳಿ ನಿರ್ಮಾಣಗೊಂಡಿರುವ ಎಚ್ ಎಎಲ್ ಹೆಲಿಕಾಫ್ಟರ್ ಘಟಕದ ಲೋಕಾರ್ಪಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಫೆ. 6ರಂದು ಆಗಮಿಸಲಿದ್ದು, ಈ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರಧಾನಿಯನ್ನು ಸ್ವಾಗತಿಸಲು ಸಜ್ಜಾಗಿದ್ದಾರೆ.
ಸೋಮವಾರ ಮಧ್ಯಾಹ್ನ 3:30ಕ್ಕೆ ಪ್ರಧಾನಿ ಆಗಮಿಸಲಿದ್ದು, ಒಂದು ಗಂಟೆಯಲ್ಲಿ ಸಮಾರಂಭ ಮುಗಿಯಲಿದೆ. ಈ ಎಚ್‌ಎಎಲ್ ಘಟಕಕ್ಕೆ ಪ್ರಧಾನಿ ಮೋದಿಯವರೇ ಶಂಕುಸ್ಥಾಪನೆ ಮಾಡಿದ್ದರು. ಇದೀಗ ಅವರೇ ಉದ್ಘಾಟನೆಯನ್ನೂ ನೆರವೇರಿಸಲಿದ್ದಾರೆ.
ಕಾರ್ಯಕ್ರಮದಲ್ಲಿ 80 ಸಾವಿರ ಬಿಜೆಪಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಚ್.ರವಿಶಂಕರ್ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1


