ನಾಗ್ಪುರ: ಪ್ರಧಾನಮಂತ್ರಿ ನರೇಂದ್ರ ಮೋದಿ ನಾಗ್ಪುರದ ಡಾ.ಹೆಡಗೇವಾರ್ ಸ್ಮೃತಿ ಮಂದಿರಕ್ಕೆ ಭೇಟಿ ನೀಡಿ ಆರ್ ಎಸ್ ಎಸ್ ಸಂಸ್ಥಾಪಕ ಕೇಶವ ಬಲಿರಾಮ್ ಹೆಡ್ಗೆವಾರ್ ಮತ್ತು ಎರಡನೇ ಸರ್ಸಂಘಚಾಲಕ್ (ಮುಖ್ಯಸ್ಥ) ಎಂಎಸ್ ಗೋಳ್ವಾಲ್ಕರ್ ಅವರ ಸ್ಮಾರಕಗಳಿಗೆ ನಮನ ಸಲ್ಲಿಸಿದರು.
RSS ಆಡಳಿತ ಕೇಂದ್ರ ಕಚೇರಿಯಾದ ರೇಶಿಂಬಾಗ್ನಲ್ಲಿರುವ ಸ್ಮೃತಿ ಮಂದಿರಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿದ ಸಂದರ್ಭದಲ್ಲಿ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಸಂಘದ ಮಾಜಿ ಪ್ರಧಾನ ಕಾರ್ಯದರ್ಶಿ ಸುರೇಶ್ ಭಯ್ಯಾಜಿ ಜೋಶಿ, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತು ಕೇಂದ್ರ ಸಚಿವ ನಿತಿನ್ ಗಡ್ಕರಿ ಜೊತೆಗಿದ್ದರು.
ಈ ಸ್ಮಾರಕಗಳು ಭಾರತೀಯ ಸಂಸ್ಕೃತಿ, ರಾಷ್ಟ್ರೀಯತೆ ಮತ್ತು ಸಂಘಟನೆಯ ಮೌಲ್ಯಗಳಿಗೆ ಸಮರ್ಪಿತವಾಗಿವೆ ಎಂದು ಪ್ರಧಾನಿ ಮೋದಿ ಸ್ಥಳದಲ್ಲಿದ್ದ ಸಂದೇಶ ಪುಸ್ತಕದಲ್ಲಿ ಹಿಂದಿಯಲ್ಲಿ ಬರೆದಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4