ಗಯಾನಾ: ಪ್ರಧಾನಿ ನರೇಂದ್ರ ಮೋದಿ ಅವರು ಗಯಾನಾದಲ್ಲಿ ರಾಮ ಭಜನೆ ಮಾಡಿ ಗಮನ ಸೆಳೆದರು. ಐದು ದೇಶಗಳಿಗೆ ಮೂರು ದಿನಗಳ ಪ್ರವಾಸದಲ್ಲಿರುವ ಮೋದಿ ಅವರು ವಿದೇಶ ಪ್ರವಾಸದ ಕೊನೆಯ ದಿನದಂದು ಗಯಾನಾದಲ್ಲಿ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು.
ಗಯಾನಾದಲ್ಲಿರುವ ಮಹಾತ ಗಾಂಧಿಸಾರಕಕ್ಕೆ ತೆರಳಿ ರಾಷ್ಟ್ರಪಿತನಿಗೆ ನಮನ ಸಲ್ಲಿಸಿದರು ಬಳಿಕ ಭಜನಾಕಾರರೊಂದಿಗೆ ಸೇರಿದ ಮೋದಿ ಅವರು ತಾಳ ಹಾಕುವ ಮೂಲಕ ಭಜನೆ ಮಾಡಿ ಗಮನ ಸೆಳೆದರು.
ಇದಕ್ಕೂ ಮುನ್ನ ಪ್ರಧಾನಿ ಮೋದಿ ಗಯಾನಾದ ಜಾರ್ಜ್ಟೌನ್ನಲ್ಲಿರುವ ಭಾರತೀಯ ಸಾರಕಕ್ಕೆ ಭೇಟಿ ನೀಡಿ, ಅಲ್ಲಿ ಸಸಿ ನೆಟ್ಟಿದ್ದಾರೆ. ಕಳೆದ 56 ವರ್ಷಗಳಲ್ಲಿ ಗಯಾನಾಗೆ ಭೇಟಿ ನೀಡಿದ ಏಕೈಕ ಭಾರತೀಯ ಪ್ರಧಾನಿ ಮೋದಿ ಆಗಿದ್ದಾರೆ. ಗಯಾನಾಗೆ ಭೇಟಿ ನೀಡಿದ ಪ್ರಧಾನಿ ಮೋದಿ ಅವರಿಗೆ ಅಲ್ಲಿನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296