ಸಿರಾ: ಸಕ್ಕರ ನಾಗರಾಜು ಅವರ ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆಯು ಕಾರ್ಯಕ್ರಮವು ಸೆ. 6 ರಂದು ನಗರದ ನಿವೃತ್ತ ನೌಕರರ ಸಂಘದ ಆವರಣದಲ್ಲಿ ನಡೆಯಲಿದೆ.
ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಬರಗೂರು ಮೇಷ್ಟ್ರ ಬಳಗ, ಬುದ್ಧ, ಬಸವ, ಅಂಬೇಡ್ಕರ್ ಸಾಂಸ್ಕೃತಿಕ ಪ್ರತಿಷ್ಠಾನ ಇವರ ಸಹಯೋಗದಲ್ಲಿ ಅಂದು ಬೆಳಗ್ಗೆ 10.30ಕ್ಕೆ ಕವನ ಸಂಕಲನ ಬಿಡುಗಡೆ ಕಾರ್ಯಕ್ರಮ ಇದೆ.
ಗಂಗಾವತಿ ಸರ್ಕಾರಿ ಪ್ರ.ದ. ಕಾಲೇಜಿನ ಸಹ ಪ್ರಾಧ್ಯಾಪಕಿ ಹಾಗೂ ಕವಯಿತ್ರಿ ಡಾ.ಮುಮ್ತಾಜ್ ಬೇಗಂ ಕೃತಿ ಬಿಡುಗಡೆ ಮಾಡುವರು. ಸಾಹಿತಿ ಭುವನಹಳ್ಳಿ ನಾಗರಾಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಚಿಂತಕ ಡಾ.ತಿಮ್ಮನಹಳ್ಳಿ ವೇಣುಗೋಪಾಲ್ ಪ್ರಾಸ್ತಾವಿಕ ನುಡಿಗಳನ್ನಾಡುವರು.
ಜಿಲ್ಲಾ ಲೇಖಕಿಯರ ಸಂಘದ ಅಧ್ಯಕ್ಷೆ ಡಾ.ಆಶಾ ಬಗ್ಗನಡು ಕೃತಿ ಕುರಿತು ಮಾತನಾಡುವರು. ಮುಖ್ಯ ಅತಿಥಿಗಳಾಗಿ ತಾ. ಕಸಾಪ ಅಧ್ಯಕ್ಷ ಬಿಪಿ ಪಾಂಡುರಂಗಯ್ಯ, ವೈ ನರೇಶ್ಬಾಬು, ಎನ್.ಕುಮಾರ್, ಡಾ.ಡಿಎಂ ಗೌಡ, ಡಿಎಸ್ ಕೃಷ್ಣಮೂರ್ತಿ, ಎಸ್ವಿ ಚಲಪತಿ, ರೂಪೇಶ್ ಕೃಷ್ಣಯ್ಯ ಸೇರಿದಂತೆ ಹಲವು ಪ್ರಮುಖರು ಪಾಲ್ಗೊಳ್ಳುವರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
