ಕಳೆದ ವಾರ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ ಪ್ರಕರಣ ದಾಖಲಿಸಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವೃತ್ತಿ ವೈಷಮ್ಯಕ್ಕೆ ಹತ್ಯೆ ಮಾಡಿದ್ದ ಮೂವರನ್ನು ಬಂಧಿಸಿದ್ದಾರೆ.
ತಮಿಳುನಾಡು ಮೂಲದ ಆನಂದ್ ಎಂಬಾತನನ್ನು ಕೊಲೆ ಮಾಡಿದ ಆರೋಪಡಿ ಸತೀಶ್, ಪುಟ್ಟ ಹಾಗೂ ದಯಾನಂದ್ ಎಂಬುವರನ್ನು ಬಂಧಿಸಲಾಗಿದೆ.
ಈ ಆರೋಪಿಗಳು ಕಳೆದ ಜುಲೈ 2 ರಂದು ಆನಂದ್‌ನನ್ನು ಹತ್ಯೆ ಮಾಡಿದ್ದರು. ಚನ್ನನಾಯಕನಪಾಳ್ಯದ ನಿರ್ಜನ ಪ್ರದೇಶದ ಬಯಲಿನಲ್ಲಿ ಶವ ಕಂಡುಬಂದಿದ್ದು, ಬೇರೆಡೆ ಕೊಲೆ ಮಾಡಿ ಶವ ಸುಟ್ಟು ಹಾಕಿರುವ ಶಂಕೆ ವ್ಯಕ್ತವಾಗಿತ್ತು. ಕೃತ್ಯಕ್ಕೂ ಮುನ್ನ ಸ್ಥಳದಲ್ಲಿ ಮದ್ಯಪಾನ ಸೇವಿಸಿರುವುದು, ಕಸದ ರಾಶಿಯ ಮೇಲೆ ಶವ ಇರಿಸಿ ಬೆಂಕಿ ಹಚ್ಚಲಾಗಿರುವುದು ಪ್ರಾಥಮಿಕ ತನಿಖೆಯಲ್ಲಿ ಕಂಡು ಬಂದಿತ್ತು. ಪ್ರಕರಣವನ್ನು ಚುರುಕುಗೊಳಿಸಿದ ಪೊಲೀಸರು 1 ವಾರದಲ್ಲೇ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


