nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ₹83 ಲಕ್ಷ ಶೂಟ್ಔಟ್ ದರೋಡೆ ಪ್ರಕರಣ ಭೇದಿಸಿದ ಪೊಲೀಸರು; ಬಿಹಾರದಲ್ಲಿ ಇಬ್ಬರು ಆರೋಪಿಗಳ ಬಂಧನ!

    August 13, 2026

    ಬೆಂಗಳೂರು ಗ್ರಾಮಾಂತರಕ್ಕೆ ಹೇಮಾವತಿ ನೀರು ತಿರುಗಿಸುವ ಆರೋಪ: ತುಮಕೂರಿನಲ್ಲಿ ತೀವ್ರ ಪ್ರತಿಭಟನೆ, ಸಚಿವ ಪರಮೇಶ್ವರ್ ಕಾರಿಗೆ ಮುತ್ತಿಗೆ

    August 13, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್: ₹83 ಲಕ್ಷ ಶೂಟ್ಔಟ್ ದರೋಡೆ ಪ್ರಕರಣ ಭೇದಿಸಿದ ಪೊಲೀಸರು; ಬಿಹಾರದಲ್ಲಿ ಇಬ್ಬರು ಆರೋಪಿಗಳ ಬಂಧನ!
    • ಬೆಂಗಳೂರು ಗ್ರಾಮಾಂತರಕ್ಕೆ ಹೇಮಾವತಿ ನೀರು ತಿರುಗಿಸುವ ಆರೋಪ: ತುಮಕೂರಿನಲ್ಲಿ ತೀವ್ರ ಪ್ರತಿಭಟನೆ, ಸಚಿವ ಪರಮೇಶ್ವರ್ ಕಾರಿಗೆ ಮುತ್ತಿಗೆ
    • ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ
    • ತಿಪಟೂರು: ಶಾಖಾ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ ಮತ್ತು ಮಕ್ಕಳ ಜಾಗೃತಿ ಕಾರ್ಯಕ್ರಮ
    • ಸ್ವಾತಂತ್ರ್ಯ ದಿನಾಚರಣೆ : ಆ.14ರಂದು ವಿವಿಧ ಸ್ಪರ್ಧೆ
    • ಗುಬ್ಬಿ: ಆ.17ರಿಂದ22ರವರೆಗೆ  ಕೇರಳದ ಸಮರ ಕಲೆ ಕಲರಿಪಯಟ್ಟು ಶಿಬಿರ
    • ಆಟೋ ಹಾಗೂ ಟ್ಯಾಂಕರ್ ಡಿಕ್ಕಿ: ಆರು ಜನ ಕೂಲಿ ಕಾರ್ಮಿಕರ ದಾರುಣ ಸಾವು; ಸಚಿವ ಈಶ್ವರ ಖಂಡ್ರೆ ಸಂತಾಪ
    • ತುಮಕೂರು: ಮಹಾನ್ ಕ್ರಾಂತಿಕಾರಿ ಖುದಿರಾಮ್ ಬೋಸ್ 118ನೇ ಹುತಾತ್ಮ ದಿನಾಚರಣೆ – ಎಐಡಿಎಸ್ ಒ ವತಿಯಿಂದ ಶ್ರದ್ಧಾಂಜಲಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೀದರ್: ₹83 ಲಕ್ಷ ಶೂಟ್ಔಟ್ ದರೋಡೆ ಪ್ರಕರಣ ಭೇದಿಸಿದ ಪೊಲೀಸರು; ಬಿಹಾರದಲ್ಲಿ ಇಬ್ಬರು ಆರೋಪಿಗಳ ಬಂಧನ!
    ರಾಜ್ಯ ಸುದ್ದಿ August 13, 2026

    ಬೀದರ್: ₹83 ಲಕ್ಷ ಶೂಟ್ಔಟ್ ದರೋಡೆ ಪ್ರಕರಣ ಭೇದಿಸಿದ ಪೊಲೀಸರು; ಬಿಹಾರದಲ್ಲಿ ಇಬ್ಬರು ಆರೋಪಿಗಳ ಬಂಧನ!

    By adminAugust 13, 2026No Comments1 Min Read
    bidar.jpg

    ವರದಿ: ಅರವಿಂದ ಮಲ್ಲೀಗೆ, ಬೀದರ್

    ಬೀದರ್: ನಗರದ ಹೃದಯ ಭಾಗದಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ₹83 ಲಕ್ಷದ ಹೈ–ವೋಲ್ಟೇಜ್ ಶೂಟ್ ಔಟ್ ಹಾಗೂ ದರೋಡೆ ಪ್ರಕರಣಕ್ಕೆ 19 ತಿಂಗಳ ಬಳಿಕ ಬೀದರ್ ಪೊಲೀಸರು ತಾರ್ಕಿಕ ಅಂತ್ಯ ಹಾಡಿದ್ದಾರೆ. ಪ್ರಕರಣದ ಇಬ್ಬರು ಕುಖ್ಯಾತ ಆರೋಪಿಗಳನ್ನು ಬಿಹಾರದಲ್ಲಿ ಗೌಪ್ಯ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

    2025ರ ಜನವರಿ 16ರಂದು ಬೀದರ್ ನಗರದ ಮುಖ್ಯ ರಸ್ತೆಯಲ್ಲಿರುವ ಎಸ್ಬಿಐ (SBI) ಬ್ಯಾಂಕ್ ಹಾಗೂ ಎಟಿಎಂಗೆ ಹಣ ತುಂಬಲು ಸಿಎಮ್ಎಸ್ (CMS) ಸಂಸ್ಥೆಯ ವಾಹನ ಬಂದಿತ್ತು. ಈ ವೇಳೆ ಬೈಕ್ನಲ್ಲಿ ಬಂದ ದರೋಡೆಕೋರರು ಸಿಬ್ಬಂದಿಯ ಮೇಲೆ ಹಾಡುಹಗಲೇ ಗುಂಡಿನ ದಾಳಿ ನಡೆಸಿ, ₹83 ಲಕ್ಷ ನಗದನ್ನು ದೋಚಿ ಪರಾರಿಯಾಗಿದ್ದರು.

    ಈ ಭೀಕರ ಗುಂಡಿನ ದಾಳಿಯಲ್ಲಿ ಸಿಎಮ್ಎಸ್ ಸಂಸ್ಥೆಯ ಸಿಬ್ಬಂದಿ ಗಿರಿ ವೆಂಕಟೇಶ್ ಸ್ಥಳದಲ್ಲೇ ಮೃತಪಟ್ಟಿದ್ದರೆ, ಶಿವಕುಮಾರ್ ಎಂಬ ಮತ್ತೊಬ್ಬ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದರು. ಈ ಘಟನೆ ಸಾರ್ವಜನಿಕರಲ್ಲಿ ಭಾರಿ ಆತಂಕ ಸೃಷ್ಟಿಸಿತ್ತು ಹಾಗೂ ಬೀದರ್ ಪೊಲೀಸರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿತ್ತು.

    ಬಿಹಾರದಲ್ಲಿ ಖಾಕಿ ಪಡೆ ಕಾರ್ಯಾಚರಣೆ:

    ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಪ್ರದೀಪ್ ಗುಂಟಿ ಅವರ ಮಾರ್ಗದರ್ಶನ ಹಾಗೂ ನೇರ ಉಸ್ತುವಾರಿಯಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು.

    ತಾಂತ್ರಿಕ ಮಾಹಿತಿ ಮತ್ತು ಸಿಸಿಟಿವಿ ಸುಳಿವುಗಳ ಆಧಾರದ ಮೇಲೆ ಸತತ ನಿಗಾವಹಿಸಿದ ಪೊಲೀಸರು, ಬಿಹಾರದ ವೈಶಾಲಿ ಜಿಲ್ಲೆಯ ಧಾಮೋದರ್ ಗ್ರಾಮದಲ್ಲಿ ದಾಳಿ ನಡೆಸಿ ಆರೋಪಿಗಳಾದ ಅಲೋಕ್ ಕುಮಾರ್ ಹಾಗೂ ಅಮನ್ ಕುಮಾರ್ ಅವರನ್ನು ಬಂಧಿಸಿದ್ದಾರೆ.

    ಬಂಧಿತ ಆರೋಪಿಗಳನ್ನು ಬಿಹಾರದಿಂದ ಬೀದರ್ ಗೆ ಕರೆತರಲಾಗುತ್ತಿದ್ದು, ಲೂಟಿ ಮಾಡಿದ ₹83 ಲಕ್ಷ ಹಣದ ಚೇತರಿಕೆ, ಕೃತ್ಯಕ್ಕೆ ಬಳಸಿದ ಶಸ್ತ್ರಾಸ್ತ್ರಗಳು ಹಾಗೂ ಈ ದರೋಡೆ ಜಾಲದ ಕುರಿತು ತೀವ್ರ ವಿಚಾರಣೆ ನಡೆಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    admin
    • Website

    Related Posts

    ಸಚಿವ ಈಶ್ವರ ಖಂಡ್ರೆ ಆಗಮನ ವೇಳೆ ಗದ್ದಲ: ಮುಜುಗರದಿಂದ ಪ್ರವಚನ ಅರ್ಧಕ್ಕೇ ನಿಲ್ಲಿಸಿ ವೇದಿಕೆಯಿಂದ ನಿರ್ಗಮಿಸಿದ ಶ್ರೀ ಗವಿಸಿದ್ಧೇಶ್ವರ ಸ್ವಾಮೀಜಿ!

    August 12, 2026

    ನೂತನ ಸಚಿವರಿಗೆ ಸರ್ಕಾರಿ ನಿವಾಸ ಹಾಗೂ ಕಾರು ಹಂಚಿಕೆ: ಡಿಪಿಎಆರ್ ಆದೇಶ

    August 12, 2026

    ಆಗಸ್ಟ್ 14 ರಂದು ಕರ್ನಾಟಕ ವಿಧಾನಸಭೆಗೆ ಹೊಸ ಸ್ಪೀಕರ್ ಆಯ್ಕೆ

    August 12, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬೀದರ್: ₹83 ಲಕ್ಷ ಶೂಟ್ಔಟ್ ದರೋಡೆ ಪ್ರಕರಣ ಭೇದಿಸಿದ ಪೊಲೀಸರು; ಬಿಹಾರದಲ್ಲಿ ಇಬ್ಬರು ಆರೋಪಿಗಳ ಬಂಧನ!

    August 13, 2026

    ವರದಿ: ಅರವಿಂದ ಮಲ್ಲೀಗೆ, ಬೀದರ್ ಬೀದರ್: ನಗರದ ಹೃದಯ ಭಾಗದಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ₹83 ಲಕ್ಷದ ಹೈ–ವೋಲ್ಟೇಜ್ ಶೂಟ್…

    ಬೆಂಗಳೂರು ಗ್ರಾಮಾಂತರಕ್ಕೆ ಹೇಮಾವತಿ ನೀರು ತಿರುಗಿಸುವ ಆರೋಪ: ತುಮಕೂರಿನಲ್ಲಿ ತೀವ್ರ ಪ್ರತಿಭಟನೆ, ಸಚಿವ ಪರಮೇಶ್ವರ್ ಕಾರಿಗೆ ಮುತ್ತಿಗೆ

    August 13, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ತಿಪಟೂರು: ಶಾಖಾ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ ಮತ್ತು ಮಕ್ಕಳ ಜಾಗೃತಿ ಕಾರ್ಯಕ್ರಮ

    August 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.