ಯಲಹಂಕ: ಬೈಕ್ ವ್ಹೀಲಿಂಗ್ ಮಾಡಿದ ಯುವಕರಿಗೆ ರಾಜಾನುಕುಂಟೆ ಪೊಲೀಸರು ಬಿಸಿಮುಟ್ಟಿಸಿದ್ದು, ಯುವಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, 2 ದ್ವಿಚಕ್ರವಾಹನಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.
ಕಿಡಿಗೇಡಿಗಳು ರಾಜಾನುಕುಂಟೆ–ಕಾಕೋಳು ರಸ್ತೆಯಲ್ಲಿ ಅಪಾಯಕಾರಿ ಬೈಕ್ ವ್ಹೀಲಿಂಗ್ ಮಾಡುತ್ತಾ ಸಾರ್ವಜನಿಕ ವಾಹನ ಸಂಚಾರಕ್ಕೆ ಅಡ್ಡಿಯುಂಟು ಮಾಡುತ್ತಿದ್ದರು. ಯಲಹಂಕ ತಾಲೂಕು ರಾಜಾನುಕುಂಟೆಯ ಮಾದಪ್ಪನಹಳ್ಳಿಯಲ್ಲಿ ಫೆಬ್ರವರಿ 28ರ ಸಂಜೆ ಪೊಲೀಸರು ಗಸ್ತು ಮಾಡುವ ವೇಳೆ ಇದನ್ನು ಪೊಲೀಸರು ಗಮನಿಸಿ ಪ್ರಕರಣ ದಾಖಲಿಸಿದ್ದಾರೆ.
ಬೈಕ್ ವ್ಹೀಲಿಂಗ್ ಮಾಡಿದ ಯುವಕರು ಬೆಂಗಳೂರಿನ ಗಂಗಮ್ಮ ಸರ್ಕಲ್ನ ರಾಮಚಂದ್ರಪುರದ ನಿವಾಸಿಗಳಾಗಿದ್ದಾರೆ ಎಂದು ತಿಳಿದು ಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4