ತುಮಕೂರು: ಪೊಲೀಸ್ ಇಲಾಖೆಯಲ್ಲಿ ಸೇವೆ ಮತ್ತು ತ್ಯಾಗದ ಮಹತ್ವ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿ ಹಾಗೂ ಸಾಮಾಜಿಕ ಭದ್ರತೆಯನ್ನು ಕಲ್ಪಿಸುವ ಕಾರ್ಯವನ್ನು ಎಂದು ನೆನಪಿಸಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ತಿಳಿಸಿದ್ದಾರೆ
ಪೊಲೀಸ್ ಧ್ವಜ ದಿನಾಚರಣೆಯ ಅಂಗವಾಗಿ ತುಮಕೂರಿನ ಪೊಲೀಸ್ ಕವಾಯಿತು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪೊಲೀಸ್ ಧ್ವಜ ದಿನಾಚರಣೆಯ ಅಂಗವಾಗಿ ಇಂದು ಪೊಲೀಸ್ ಧ್ವಜಗಳನ್ನು ಮಾರಾಟ ಮಾಡಿ ಅದರಿಂದ ಬಂದ ಹಣವನ್ನು ನಿವೃತ್ತ ಪೊಲೀಸರ ಸಹಾಯಕ್ಕಾಗಿ ಬಳಸಿಕೊಳ್ಳಲಾಗುವುದು ಎಂದರು.
ಕ್ಷೇಮ ನಿಧಿಯಲ್ಲಿ ಇರಿಸಲಾಗುವ ಈ ಹಣವನ್ನು ನಿವೃತ್ತ ಪೊಲೀಸರ ಕುಟುಂಬದ ಆರ್ಥಿಕ ಸಹಾಯಕ್ಕೆ ಬಳಸಿಕೊಳ್ಳಲಾಗುವುದು ಎಂದು ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4