ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಡೆದ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾರ್ಟಿಯಲ್ಲಿ ಪಾಲ್ಗೊಂಡವರ ವಿವರ ಪೊಲೀಸರ ಬಳಿಯಿದೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಬೆಂಗಳೂರಿನಲ್ಲಿ ರೇವ್ ಪಾರ್ಟಿ ನಡೆಯುತ್ತಿತ್ತು ಎಂದು ಸಿಸಿಬಿಯವರು ದಾಳಿ ಮಾಡಿದ್ದಾರೆ. ಯಾರ್ ಯಾರು ಬಂದಿದ್ದರು ಎಂದು ಪೊಲೀಸರು ಮಾಹಿತಿ ತೆಗೆದುಕೊಂಡಿದ್ದಾರೆ.
ದಾಳಿ ವೇಳೆ ಡ್ರಗ್ಸ್, ಸಿಂಥೆಟಿಕ್ ಡ್ರಗ್ಸ್ ಪತ್ತೆ ಆಗಿದೆ. ಕಾನೂನು ಪ್ರಕಾರ ಕ್ರಮ ಆಗಲಿದೆ. ಡ್ರಗ್ಸ್ ಫ್ರೀ ರಾಜ್ಯ ಮಾಡಬೇಕು ಎಂದು ಇದ್ದೇವೆ. ಸಾವಿರಾರು ಕೋಟಿ ಡ್ರಗ್ಸ್ ದಂಧೆ ಹಿಡಿದಿದ್ದೇವೆ. ಡ್ರಗ್ಸ್ ಪೂರೈಕೆ, ಸಾಗಣೆ ಹತ್ತಿಕ್ಕುವ ಕೆಲಸ ಆಗುತ್ತಿದೆ. ಗಾಂಜಾ ಎಲ್ಲಿಂದ ಬರುತ್ತೆ ಎಂದು ಮಾಹಿತಿ ಮೇಲೆ ಹಿಡಿಯುತ್ತೇವೆ. ಪೆಡ್ಲರ್ಸ್ ಯಾರಿದ್ದಾರೆ ಅವರನ್ನು ಹಿಡಿಯವುದು ಬಹಳ ಮುಖ್ಯ. ಸ್ಟೂಡೆಂಟ್ಸ್ ಎಂದು ಹೇಳಿಕೊಂಡು ಇಲ್ಲಿ ಬಂದು ಕೃತ್ಯ ಮಾಡುತ್ತಾರೆ. ಅವರ ಮೇಲೆ ನಿಗಾ ಇಟ್ಟಿದ್ದೇವೆ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


