ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ನಗರದ ಪೊಲೀಸ್ ಕ್ವಾಟ್ರಸ್‌ನಲ್ಲಿ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ನಾಗರಾಜ್ ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಆಗಿದ್ದಾರೆ.
ಡಿ.ಎ.ಆರ್ ನಲ್ಲಿ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗರಾಜ್, ಅವರು ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಫ್ಯಾನ್ ಗೆ ನೇಣಿಗೆ ಶರಣಾಗಿದ್ದಾರೆ. ಕೌಟುಂಬಿಕ ಕಲಹಕ್ಕೆ ಬೇಸತ್ತುಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಶಂಕಿಸಲಾಗಿದೆ. ನಾಗರಾಜ್ ಬರೆದಿದ್ದ ಡೆತ್ ನೋಟ್ ಸಿಕ್ಕಿದೆ.
ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296