ತುಮಕೂರು: ಪೊಲೀಸ್ ಹುತಾತ್ಮ ದಿನಾಚರಣೆ ಅಂಗವಾಗಿ ಇಂದು ತುಮಕೂರಿನಲ್ಲಿ ಜಿಲ್ಲಾ ಪೊಲೀಸ್ ಕಚೇರಿ ಆವರಣದಲ್ಲಿ ಇರುವ ಹುತಾತ್ಮ ಪುತ್ಥಳಿಗೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಜಯಂತ್ ಕುಮಾರ್ ಪುಷ್ಪ ನಮನ ಸಲ್ಲಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮರಿಯಪ್ಪ ಹಾಜರಿದ್ದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಅವರು, ಭಾರತದಲ್ಲಿ ಕಳೆದ ವರ್ಷ ಕರ್ತವ್ಯದಲ್ಲಿದ್ದ 213 ಮಂದಿ ಪೊಲೀಸರು ಹುತಾತ್ಮರಾಗಿದ್ದರು, ಅವರಲ್ಲಿ ಕರ್ನಾಟಕದಲ್ಲಿ ಇವರು ಹುತಾತ್ಮರಾಗಿದ್ದರು. ಇವರಲ್ಲಿ ತುಮಕೂರು ಜಿಲ್ಲೆಯ ಕೂಡಿಗೇನಹಳ್ಳಿ ಪೊಲೀಸ್ ಠಾಣೆ ಯ ಪೊಲೀಸ್ ಸಿಬ್ಬಂದಿ ಕರ್ತವ್ಯದಲ್ಲಿದ್ದ ವೇಳೆ ಮಹೇಶ್ ಜಿ.ವಿ.ಹುತಾತ್ಮರಾಗಿದ್ದರು ಎಂದರು.
ಇದೇ ಸಂದರ್ಭದಲ್ಲಿ ಹುತಾತ್ಮರಾಗಿರುವ ಪೊಲೀಸ್ ಸಿಬ್ಬಂದಿ ಮಹೇಶ್ ಅವರ ಪೋಷಕರು ಹುತಾತ್ಮ ಪುತ್ತಳಿಗೆ ಪುಷ್ಪ ನಮನ ಸಲ್ಲಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q