ಮೈಸೂರು: ಉದಯಗಿರಿ ಗಲಭೆಯಲ್ಲಿ ಪೊಲೀಸರ ತಪ್ಪಿಲ್ಲ, ಪೊಲೀಸರು ಸರಿಯಾಗಿ ಕೆಲಸ ಮಾಡಿ ಪರಿಸ್ಥಿತಿ ನಿಭಾಯಿಸಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಉದಯಗಿರಿ ಗಲಭೆಗೆ ಪೊಲೀಸರ ಕರ್ತವ್ಯಲೋಪ ಕಾರಣ ಎಂಬ ಸಚಿವ ಕೆ.ಎನ್. ರಾಜಣ್ಣ ಹೇಳಿಕೆ ಬಗ್ಗೆ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಪೊಲೀಸರು ಸರಿಯಾಗಿ ಕೆಲಸ ಮಾಡಿ ಪರಿಸ್ಥಿತಿ ನಿಭಾಯಿಸಿದ್ದಾರೆ. ಪೊಲೀಸರು ಗಾಯಗೊಂಡರೂ ಸಮಯ ಪ್ರಜ್ಞೆಯಿಂದ ಕೆಲಸ ಮಾಡಿದ್ದಾರೆ. ನಾನು ನಮ್ಮ ಪೊಲೀಸರ ಪರವಾಗಿಯೇ ಇದ್ದೇನೆ ಎಂದು ಅವರು ಹೇಳಿದರು.
ರಾಜಣ್ಣ ಅವರ ಹೇಳಿಕೆಗೆ ಸಿಎಂ 8—10 ದಿನಗಳಲ್ಲಿ ಪ್ರತಿಕ್ರಿಯೆ ಕೊಡುತ್ತಾರೆ. ಕಲ್ಲು ಎಸೆದಿರುವವರೆಲ್ಲರೂ 14, 15 ವರ್ಷದ ಹುಡುಗರು. ಮುಖಂಡರ ಮಾತನ್ನೂ ಅವರು ಕೇಳಿಲ್ಲ. ಹಿರಿಯರು ಮತ್ತು ಮುಖಂಡರೂ ಸೇರಿ ಗಲಭೆ ಕಂಟ್ರೋಲ್ ಮಾಡಿದ್ದಾರೆ. ಪೊಲೀಸರಿಗಾದರೆ ಪ್ರೊಟೆಕ್ಷನ್ ಇತ್ತು, ಅಲ್ಲಿದ್ದ ಜನರಿಗೆ ಇರಲಿಲ್ಲ. ಪೊಲೀಸರು ಗಲಭೆ ಮಾಡಿದವರ ಪತ್ತೆ ಮಾಡುವ ಕೆಲಸ ಮಾಡುತ್ತಿದ್ದಾರೆ. ಪೊಲೀಸರು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಂಡು ಅರೆಸ್ಟ್ ಮಾಡುತ್ತಾರೆ ಎಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4