nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ

    March 7, 2026

    ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ

    March 7, 2026

    ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ

    March 7, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ
    • ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ
    • ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ತುಮಕೂರಿನಲ್ಲಿ ಮಾ.11ಕ್ಕೆ ಬೃಹತ್ ನೇರ ಸಂದರ್ಶನ
    • ಸಾರಿಗೆ ಕ್ಷೇತ್ರಕ್ಕೆ ಬಂಪರ್ ಕೊಡುಗೆ: 2,000 ಕೋಟಿ ರೂ. ವೆಚ್ಚದಲ್ಲಿ 4,000 ಎಲೆಕ್ಟ್ರಿಕ್ ಬಸ್‌ ಗಳ ಸೇರ್ಪಡೆ
    • ಸಾಲವಿಲ್ಲದೆ ಯಾವುದೇ ದೇಶ–ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ; ಟೀಕಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ: ಸಿಎಂ ಸಿದ್ದರಾಮಯ್ಯ ತಿರುಗೇಟು
    • ಸಾಗರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಅಧ್ಯಕ್ಷರಾಗಿ ರತ್ನಮ್ಮ ಶಿವರಾಜು, ಉಪಾಧ್ಯಕ್ಷರಾಗಿ ಪುಟ್ಟಸಿದ್ದಯ್ಯ ಅವಿರೋಧ ಆಯ್ಕೆ
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದಯಾಮರಣ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮತ್ತು ರಾಷ್ಟ್ರಪತಿಗಳಿಗೆ ಪತ್ರ ಬರೆದ ಪೊಲೀಸ್​ ಸಿಬ್ಬಂದಿ: ಕಾರಣ ಏನು ಗೊತ್ತೇ..?
    ರಾಷ್ಟ್ರೀಯ ಸುದ್ದಿ February 24, 2024

    ದಯಾಮರಣ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮತ್ತು ರಾಷ್ಟ್ರಪತಿಗಳಿಗೆ ಪತ್ರ ಬರೆದ ಪೊಲೀಸ್​ ಸಿಬ್ಬಂದಿ: ಕಾರಣ ಏನು ಗೊತ್ತೇ..?

    By adminFebruary 24, 2024No Comments2 Mins Read
    police

    ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸುಮಾರು ಮೂರು ವರ್ಷಗಳಿಂದ ಪತಿ-ಪತ್ನಿ ಕರ್ತವ್ಯ ನಿರ್ವಹಿಸುತ್ತಿದ್ದು, ಇಬ್ಬರೂ ಬೇರೆ ಬೇರೆ ಜಿಲ್ಲೆಯಲ್ಲಿದ್ದಾರೆ. ಇದರಿಂದ ನಮಗೆ ನೆಮ್ಮದಿಯಾಗಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಗುತ್ತಿಲ್ಲವೆಂದು ಪೊಲೀಸ್​ ಸಿಬ್ಬಂದಿ ದಯಾಮರಣ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೆ ಮತ್ತು ರಾಷ್ಟ್ರಪತಿಗಳಿಗೆ ಪತ್ರ ಬರೆದ ಘಟನೆ ನಡೆದಿದೆ.

    ಪತಿ ಒಂದು ಜಿಲ್ಲೆಯಲ್ಲಿ ವಾಸ, ಪತ್ನಿ ಇನ್ನೊಂದು ಜಿಲ್ಲೆಯಲ್ಲಿ ವಾಸಿಸುತ್ತಿದ್ದಾರೆ. ಇದರಿಂದ ಗಂಡ-ಹೆಂಡತಿ ಜೊತೆಯಲ್ಲಿ ಇರಲು ಸಾಧ್ಯವಾಗುತ್ತಿಲ್ಲ. ವಿಚ್ಛೇದನ ಪ್ರಕರಣ ಕೂಡ ಹೆಚ್ಚುತ್ತಿವೆ. ಕೆಲ ಸಿಬ್ಬಂದಿ ವಯಸ್ಸಾದ ತಂದೆ ತಾಯಿಯನ್ನು ನೋಡಿಕೊಳ್ಳಬೇಕಿದೆ. ಹೀಗಾಗಿ ವರ್ಗಾವಣೆ ಕೋರಿ ಮನವಿ ಮಾಡಿದ್ದಾರೆ. ಮುಖ್ಯಮಂತ್ರಿಗಳು, ಗೃಹ ಇಲಾಖೆ ಮಂತ್ರಿಗಳು ಬಾಯಿ ಮಾತಿನಲ್ಲಿ ವರ್ಗಾವಣೆ ಮಾಡುತ್ತೇವೆ ಅಂತ ಹೇಳುತ್ತಾರೆ.


    Provided by
    Provided by

    ಆದರೆ ಅಂತರ ಜಿಲ್ಲಾ ವರ್ಗಾವಣೆ ಲಿಖಿತ ರೂಪದಲ್ಲಿ ಬರುತ್ತಿಲ್ಲ ಎಂದು ರಾಜ್ಯದ ಹಲವು ಠಾಣೆಗಳಲ್ಲಿನ ಸಿಬ್ಬಂದಿ ಪತ್ರ ಬರೆದಿದ್ದಾರೆ. ಸುಪ್ರೀಂಕೋರ್ಟ್ ಆದೇಶ ಮತ್ತು ಕೆಸಿಎಸ್ಆ‌ರ್ ನಿಯಮದ ಪ್ರಕಾರ ಪತಿ-ಪತ್ನಿ ಒಂದೆ ಘಟಕ ಹಾಗೂ ಒಂದೆ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಲು ನಿಯಮ ಇದ್ದರು ಕೂಡ ಕಳೆದ 3 ವರ್ಷಗಳಿಂದ ಮಾನ್ಯ ಕರ್ನಾಟಕ ಸರ್ಕಾರವಾಗಲಿ, ರಾಜ್ಯ ಗೃಹ ಸಚಿವರಾಗಲಿ, ಪೊಲೀಸ್​ ಮುಖ್ಯಸ್ಥರಾಗಲಿ ಯಾವುದೆ ವರ್ಗಾವಣೆ ಮಾಡುತ್ತಿಲ್ಲ.

    ಈ ವಿಚಾರವಾಗಿ ಸುಮಾರು 3 ವರ್ಷಗಳಿಂದ ಮಾನ್ಯ ಗೃಹ ಸಚಿವರಿಗೆ ಪತಿ-ಪತ್ನಿ ಪ್ರಕರಣದಲ್ಲಿ ಅಂತರ್ ಜಿಲ್ಲಾ ವರ್ಗಾವಣೆ ಮಾಡುವಂತೆ ಅನೇಕ ಬಾರಿ ಮನವಿ ಸಲ್ಲಿಸಿದ್ದು, ಈ ವಿಚಾರವಾಗಿ ಶೀಘ್ರದಲ್ಲೇ ವರ್ಗಾವಣೆ ಮಾಡುತ್ತೇವೆ ಅಂತ ಮಾಧ್ಯಮಗಳ ಮುಂದೆ 3 ವರ್ಷಗಳಿಂದ ಹೇಳಿಕೆ ನೀಡಿರುತ್ತಾರೆ ವಿನಃ ಯಾವುದೆ ವರ್ಗಾವಣೆ ಮಾಡುತ್ತಿಲ್ಲ ಎಂದು ಆರೋಪಿಸಿದ್ದಾರೆ.

    ನಮಗೆ ವರ್ಗಾವಣೆ ಆಗದೆ ಇರುವುದಕ್ಕೆ ದಾಂಪತ್ಯದಲ್ಲಿ ಬಿರುಕು ಬಿಟ್ಟು ಎಷ್ಟೋ ಸಂಸಾರಗಳು ವಿಚ್ಛೇದನ ಪಡೆಯುವ ಹಂತಕ್ಕೆ ತಲುಪಿವೆ. ಕೆಲವು ವಿಚ್ಛೇದನ ಕೊಟ್ಟಾಗಿದೆ. ಇನ್ನು ಕೆಲವರಲ್ಲಿ ಪತಿ-ಪತ್ನಿ ಯಾರು ಬೇರೆ ಬೇರೆ ಇರುವುದರಿಂದ ಮದುವೆಯಾಗಿ 5 ವರ್ಷ ಕಳೆದರೂ ಇನ್ನು ಕೂಡ ಮಕ್ಕಳು ಆಗುತ್ತಿಲ್ಲ.

    ನಮ್ಮದು ಶಿಸ್ತಿನ ಇಲಾಖೆ ಹಾಗಾಗಿ ಬೇರೆ ಇಲಾಖೆಯವರಂತೆ ಪ್ರತಿಭಟನೆ ಮಾಡಲು ಅವಕಾಶ ವಿರುವುದಿಲ್ಲ. ಬೇರೆ ಇಲಾಖೆಯಲ್ಲಿ ಅಂತ‌ರ್ ಜಿಲ್ಲಾ ವರ್ಗಾವಣೆ ನಡೆದಿದೆ. ಆದರೆ ಪೊಲೀಸ್ ಇಲಾಖೆಯಲ್ಲಿ 2021 ರಿಂದ ಯಾವುದೆ ವರ್ಗಾವಣೆ ಆಗಿರುವುದಿಲ್ಲ. ಆದ ಕಾರಣ ನಮಗೆ ನೆಮ್ಮದಿಯಾಗಿ ಕರ್ತವ್ಯ ನಿರ್ವವಹಿಸಲು ಆಗುತ್ತಿಲ್ಲ. ನಮಗೆ ನೆಮ್ಮದಿ ಅನ್ನೋದು ಹಾಳಾಗಿ ಆರೋಗ್ಯದಲ್ಲಿ ತೊಂದರೆ ಉಂಟಾಗಿವೆ. ಆದ ಕಾರಣ ದಯಾಳುಗಳಾದ ತಾವುಗಳು ನಮಗೆ ಸಾಮೂಹಿಕ ಮರಣ ಪಡೆಯಲು ದಯಾಮಾಡಿ ದಯಾಮರಣ ಕಲ್ಪಿಸಿಕೊಂಡಬೇಕೆಂದು ನೊಂದ ಮನಸ್ಸಿನಿಂದ ಈ ಮೂಲಕ ಕಳಕಳಿಯಿಂದ ಬೇಡಿಕೊಳ್ಳುತ್ತೇವೆ”. ಎಂದು ಪೊಲೀಸ್​ ಸಿಬ್ಬಂದಿ ಪತ್ರ ಬರೆದಿದ್ದಾರೆ ಎನ್ನಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

     

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ

    March 7, 2026

    ತುಮಕೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿಯನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ, ಒಳಮೀಸಲಾತಿ ಹೋರಾಟ ಸಮಿತಿ…

    ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ

    March 7, 2026

    ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ

    March 7, 2026

    ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ತುಮಕೂರಿನಲ್ಲಿ ಮಾ.11ಕ್ಕೆ ಬೃಹತ್ ನೇರ ಸಂದರ್ಶನ

    March 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.