ಕೊಪ್ಪಳ: ವಿದೇಶಿ ಮಹಿಳೆ ಸೇರಿದಂತೆ ಇಬ್ಬರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆಯ ಬೆನ್ನಲ್ಲೇ ಕೊಪ್ಪಳ ಜಿಲ್ಲಾ ಪೊಲೀಸ್ ಇಲಾಖೆ ಗಂಗಾವತಿ ತಾಲೂಕಿನ ಆನೆಗೊಂದಿ ಮತ್ತು ಕೊಪ್ಪಳ ತಾಲೂಕಿನ ಬಸ್ಸಾಪುರ ಸುತ್ತಮುತ್ತಲಿರುವ ಹೋಂ ಸ್ಟೇ, ರೆಸಾರ್ಟ್ ಗಳ ಮೇಲೆ ದಾಳಿ ನಡೆಸಿದ್ದಾರೆ.
ಹೋಂ ಸ್ಟೇ, ರೆಸಾರ್ಟ್ಗಳು ವಿದೇಶಿಗರ ಬಗ್ಗೆ ಯಾವುದೇ ಮಾಹಿತಿ ನೀಡದ ಆರೋಪ ಮತ್ತು ಅಕ್ರಮ ಚಟುವಟಿಕೆ ನಡೆಯುತ್ತಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಅರಸಿದ್ದಿ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ.
ರಿಜಿಸ್ಟರ್ ಪುಸ್ತಕ ಸೇರಿದಂತೆ ವಿವಿಧ ದಾಖಲೆಗಳನ್ನು ಪರಿಶೀಲನೆ ನಡೆಸಿ, ಸಂಪೂರ್ಣ ತಪಾಸಣೆ ನಡೆಸಿ ಅಕ್ರಮ ಚಟುವಟಿಕೆ ನಡೆಸಿದರೇ ಕಠಿಣ ಕ್ರಮ ಕೈಗೊಳ್ಳುವುದಾಗಿ ಮಾಲೀಕರಿಗೆ ಎಚ್ಚರಿಕೆ ನೀಡಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4