ಪಾವಗಡ: ತಾಲೂಕಿನ ಕೊತ್ತೂರು ಸಮೀಪದ ಸಾಕಮ್ಮನಗುಡ್ಡದಲ್ಲಿ ನಡೆಯುತ್ತಿದ್ದ ಜೂಜು ಅಡ್ಡೆಯ ಮೇಲೆ ಭಾನುವಾರ ಮಧ್ಯರಾತ್ರಿ 12 ಗಂಟೆಗೆ ಅರಸೀಕೆರೆ ಠಾಣೆಯ ಪೊಲೀಸರು ದಾಳಿ ನಡೆಸಿ ಬರೋಬ್ಬರಿ 2,22,290 ಹಣ ಒಂಬತ್ತು ಜನ ಆರೋಪಿಗಳನ್ನು ಹಾಗೂ ನಾಲ್ಕು ಬೈಕ್ ಗಳನ್ನು ವಶಪಡಿಸಿಕೊಂಡಿದ್ದಾರೆ,
ಖಚಿತ ಮಾಹಿತಿಯ ಮೇರೆಗೆ ಗ್ರಾಮಾಂತರ ಪೊಲೀಸ್ ಠಾಣೆಯ ಸಿಪಿಐ ಗಿರೀಶ್ ಅವರ ನೇತೃತ್ವದಲ್ಲಿ ಪಿಎಸ್ ಐ ತಾರಸಿಂಗ್ ಮತ್ತು ಪೊಲೀಸ್ ಪೇದೆಗಳಾದ ಸೌಕತ್, ಕೃಷ್ಣ, ಧಾವಲ್, ಸಂದೇಶರ ತಂಡ ದಾಳಿ ನಡೆಸಿದ್ದು, ಈ ಸಂಬಂಧ ಆರೋಪಿಗಳನ್ನು ಬಂಧಿಸಿ ಮುಂದಿನ ಕ್ರಮಗಳನ್ನು ಅರಸೀಕೆರೆ ಪೊಲೀಸ್ ಠಾಣೆಯ ಪೊಲೀಸರು ಕೈಗೊಂಡಿದ್ದಾರೆ.
ವರದಿ: ನಂದೀಶ್ ನಾಯ್ಕ, ಪಾವಗಡ
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:


