ಬೆಂಗಳೂರು: ಖಾಸಗಿ ಜಮೀನಿನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ದೇವನಹಳ್ಳಿ ಪೊಲೀಸರು ಭಾನುವಾರ ಬೆಳಿಗ್ಗೆ ದಾಳಿ ಮಾಡಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ ಕನ್ನಮಂಗಲ ಗೇಟ್ ಸಮೀಪ ನಡೆದಿದೆ.
ಘಟನೆ ಸಂಬಂಧ 31 ಮಂದಿಯನ್ನು ವಶಕ್ಕೆ ತೆಗೆದುಕೊಂಡು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಕನ್ನಮಂಗಲ ಗೇಟ್ ಬಳಿಯ ಫಾರ್ಮ್ ಹೌಸ್ನಲ್ಲಿ ಪಾರ್ಟಿ ನಡೆಯುತ್ತಿರುವ ಖಚಿತ ಮಾಹಿತಿ ಮೇರೆಗೆ ದೇವನಹಳ್ಳಿ ಪೊಲೀಸರು ಬೆಳಗಿನ ಜಾವ 5 ಗಂಟೆಯಲ್ಲಿ ದಾಳಿ ನಡೆಸಿದ್ದಾರೆ.
ಪರಿಶೀಲನೆ ನಡೆಸಿದಾಗ ವ್ಯಕ್ತಿಯೊಬ್ಬರ ಜನ್ಮ ದಿನದ ಅಂಗವಾಗಿ ಪಾರ್ಟಿ ಆಯೋಜನೆ ಮಾಡಲಾಗಿತ್ತು ಎಂದು ತಿಳಿದು ಬಂದಿದೆ.
ದೇವನಹಳ್ಳಿ ಎಸಿಪಿ ನವೀನ್ ನೇತೃತ್ವದ ತಂಡ ದಾಳಿ ನಡೆಸಿ, ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಯುವಕ, ಯುವತಿಯರನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದೆ.
ಮಾದಕ ವಸ್ತುಗಳನ್ನು ಬಳಕೆ ಮಾಡಿರುವುದು ಕಂಡು ಬಂದಿದೆ. 24 ಯುವಕರು, 7 ಯುವತಿಯರು ಸೇರಿದಂತೆ ಒಟ್ಟು 31 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW