ತುಮಕೂರು: ಪೊಲೀಸ್ ಠಾಣೆಯಿಂದಲೇ ಪರಾರಿಯಾಗಿದ್ದ ಬಂಧಿತ ಕಳ್ಳತನ ಪ್ರಕರಣದ ಆರೋಪಿಯನ್ನು ಕೊನೆಗೂ ಪುನಃ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬೆಂಗಳೂರಿನ ರೈಲ್ವೆ ನಿಲ್ದಾಣದಲ್ಲಿ ಸೈಯದ್ ನನ್ನು ಬಂಧಿಸಿರುವ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ತುಮಕೂರು ಜಿಲ್ಲೆ ಗುಬ್ಬಿ ಪೊಲೀಸ್ ಠಾಣೆಯಿಂದ ಎಸ್ಕೆಪ್ ಆಗಿದ್ದನು. ಸಿಆರ್ ನಂ. 13/2024 ರ ಪ್ರಕರಣದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು.
ಕಳ್ಳತನ ಪ್ರಕರಣದಲ್ಲಿ ಆರೋಪಿಯನ್ನು ಬೆಂಗಳೂರಿನಲ್ಲಿ ಬಂಧಿಸಿ ಗುಬ್ಬಿ ಠಾಣೆಗೆ ಕರೆತರಲಾಗಿತ್ತು. ಶುಕ್ರವಾರ ಬೆಳಗ್ಗೆ 4:30 ಕ್ಕೆ ಠಾಣೆಯಿಂದ ಪರಾರಿಯಾಗಿದ್ದನು.
ಆರೋಪಿ ಎಡಗೈ ಮೇಲೆ ಸಿರಿಗನ್ನಡಂ ಬಲಗೈ ಮೇಲೆ ಎಲ್ಲಾ ಧರ್ಮದ ಅಚ್ಚೆ ಇರೋದಾಗಿ ಮಾಹಿತಿ ಇದೆ. ಗದಗ ಜಿಲ್ಲೆಯ ಹುಲ್ಲೂರು ಗ್ರಾಮದ ವಾಸಿ ಆಗಿರೋ ಸೈಯದ್ , ಡ್ಯಾನ್ಸ್ ಕೋರಿಯಾಗ್ರಾಪರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದನು.
ಈ ಸಂಬಂಧ ಗುಬ್ಬಿ ಪೊಲೀಸ್ ಠಾಣೆ ಸಿಬ್ಬಂದಿ ಆರೋಪಿಯನ್ನು ಪುನಃ ವಶಕ್ಕೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಈಗಾಗಲೇ ಈ ಪ್ರಕರಣದ ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್, ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸೇರಿದಂತೆ ಐವರು ಪೊಲೀಸ್ ಸಿಬ್ಬಂದಿಗಳನ್ನು ಅಮಾನತುಗೊಳಿಸಿದ್ದಾರೆ.