ತುಮಕೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಮುಗಿದ ಹಿನ್ನೆಲೆಯಲ್ಲಿ ತುಮಕೂರಿನ ಸ್ಟ್ರಾಂಗ್ ರೂಂನಲ್ಲಿ 18 ಅಭ್ಯರ್ಥಿಗಳ ಭವಿಷ್ಯ ಭದ್ರವಾಗಿದೆ.
ತುಮಕೂರು ವಿಶ್ವವಿದ್ಯಾಲಯದ ವಿಜ್ಞಾನ ಕಾಲೇಜು ಹಾಗೂ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ಟ್ರಾಂಗ್ ರೂಂ ಸ್ಥಾಪನೆ ಮಾಡಲಾಗಿದೆ. ನಿನ್ನೆ ರಾತ್ರಿ 1,846 ಮತಗಟ್ಟೆಗಳಿಂದ ಡಿಮಸ್ಟರಿಂಗ್ ಸೆಂಟರ್ ಗೆ ಮತಪೆಟ್ಟಿಗೆಗಳನ್ನು ತರಲಾಗಿತ್ತು.
ಸ್ಟ್ರಾಂಗ್ ರೂಮ್ ನಲ್ಲಿಯೇ ಮೊಕ್ಕಾಂ ಹೂಡಿರುವ ಭದ್ರತಾ ಪಡೆ ಮತ್ತು ಪೊಲೀಸರು ಹಗಲಿರುಳು ಕಾವಲು ಕಾಯುತ್ತಿದ್ದಾರೆ. ಪ್ರತಿ ಸ್ಟ್ರಾಂಗ್ ರೂಂ ನಲ್ಲೂ ಸಿಸಿ ಕ್ಯಾಮೆರಾ ಅಳವಡಿಕೆ ಮಾಡಲಾಗಿದ್ದು ಸ್ಟ್ರಾಂಗ್ ರೂಂ ಸುತ್ತ ಮುತ್ತ ಖಾಕಿ ಹದ್ದಿನಕಣ್ಣು ಇರಿಸಲಾಗಿದೆ.
ಸ್ಟ್ರಾಂಗ್ ರೂಂಗೆ ಎಸ್ ಪಿ – 1, ಡಿವೈಎಸ್ಪಿ – 1 ಸಿಪಿಐ – 22, ಪಿಎಸ್ ಐ- 440ಪಿಸಿ ಗಳಿಂದ ಭದ್ರತೆ ವ್ಯವಸ್ಥೆ ಮಾಡಲಾಗಿದೆ.ಕೆಎಸ್ ಆರ್ ಪಿ ತುಕಡಿ, ಸೇರಿದಂತೆ ಒಟ್ಟು 100 ಮಂದಿ ಪೊಲೀಸರ ನಿಯೋಜನೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿಭದ್ರತೆ ಮಾಡಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bu0PpuFHlmt705QwiTL3vv
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA